ರೈತರ, ಕಾರ್ಮಿಕರ ಶ್ರೀಸಾಮಾನ್ಯನ ವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ರಾಜ್ಯದ ಪರವಾಗಿ ಸಂಸತ್ತಿನಲ್ಲಿ ತುಟಿಬಿಚ್ಚದ ಬಿಜೆಪಿ ಸಂಸದರುಗಳ ಮೌನ ನಡೆಯನ್ನು ಖಂಡಿಸಿ ಯುವ ಕಾಂಗ್ರೆಸ್ ನಿಂದ ಸಂಸದರ ಮನೆ ಮುತ್ತಿಗೆ – 75ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ. ಪೆಟ್ರೋಲ್ – ಡೀಸೆಲ್ ಬೆಲೆ,ಗ್ಯಾಸ್ ಸಿಲಿಂಡರ್ ದರ , ಅಗತ್ಯವಸ್ತುಗಳ ಬೆಲೆ ಏರಿಕೆ, ನೆರೆ ಪರಿಹಾರ , ರಾಜ್ಯಕ್ಕೆ ಬರಬೇಕಾದ ಜಿ.ಎಸ್.ಟಿ,ಕೊರೋನ ನಿರ್ವಹಣೆಯಲ್ಲಿ, ಕೋವಿಡ್ ಲಸಿಕೆ ನೀಡುವದರಲ್ಲಿ , ವಿಫಲವಾಗಿರುವುದನ್ನು ಮತ್ತು ಶಿವಮೊಗ್ಗ ಜಿಲ್ಲೆಯ ಸಂಸದರು ಸೇರಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತದೆ ಮೌನವಹಿಸಿರುವುದು, ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಾಯ್ದೆಯ ಮುಖಾಂತರ ಮೀಟರ್ ಅಳವಡಿಸುವ ಹಾಗೂ ರೈತರ, ಕಾರ್ಮಿಕರ ಶ್ರೀಸಾಮಾನ್ಯನ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಬೆಳಗ್ಗೆ ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಪ್ರತಿಭಟಿಸಿ ನಂತರ ಶಿವಮೊಗ್ಗ ಜಿಲ್ಲೆಯ ಬಿಜೆಪಿ ಸಂಸದರ ಮನೆಗೆ ಮುತ್ತಿಗೆ ಹಾಕಲಾಯಿತು ಈ ಸಂದರ್ಭದಲ್ಲಿ 75ಕ್ಕೂ ಹೆಚ್ಚು ಜನರನ್ನು ಬಂಧಿಸಲಾಯಿತು.

ದೇಶದಲ್ಲಿ ಅಚ್ಚೆ ದಿನ್ ತರುತ್ತೇನೆಂದು ಅಧಿಕಾರಕ್ಕೆ ಬಂದ ಕೇಂದ್ರ ಬಿಜೆಪಿ ಸರ್ಕಾರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ದಿನನಿತ್ಯ ಪೆಟ್ರೋಲ್ – ಡೀಸೆಲ್ , ಅಡುಗೆ ಅನಿಲ ದರ ಏರಿಕೆ ಮಾಡುತ್ತಾ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಗಳು ಕೂಡ ಏರಿಕೆ ಕಂಡು ಶ್ರೀಸಾಮಾನ್ಯ ಪರದಾಡುವಂತಾಗಿದೆ, ಕೋವಿಡ್ ಸಂಕಷ್ಟದಲ್ಲಿರುವ ದೇಶದ ಜನತೆಯ ನೆರವಿಗೆ ಬರಬೇಕಾದ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಕೊರೋನಾ ನಿರ್ವಹಣೆಯಲ್ಲಿ ಹಾಗೂ ಕೋವಿಡ್ ಲಸಿಕೆ ನೀಡುವುದರಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಹಾಗೆಯೇ ಪೆಗಸಿಸ್ ಫೋನ್ ಕದ್ದಾಲಿಕೆಯಲ್ಲಿ ನೇರವಾಗಿ ಶಾಮೀಲಾಗಿರುವುದು ಎದ್ದು ತೋರುತ್ತಿದ್ದು ಕೇಂದ್ರ ಗುಪ್ತಚರ ಇಲಾಖೆಯು ಸಂಪೂರ್ಣ ನಿಷ್ಕ್ರಿಯವಾಗಿದೆ. ಈಗಾಗಲೇ ರೈತ ಹಾಗೂ ಕಾರ್ಮಿಕ ವಿರೋಧಿ ಅವೈಜ್ಞಾನಿಕ ಕಾಯ್ದೆಗಳನ್ನು ಜಾರಿಗೊಳಿಸುತ್ತಿದ್ದು ಜೊತೆಗೆ ಈಗಾಗಲೇ ವಿದ್ಯುತ್ ಕಾಯ್ದೆ ಮಸೂದೆ ತಿದ್ದುಪಡಿ ರೈತರ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸುವ ನೀತಿಯನ್ನು ಜಾರಿಗೆ ತರಲು ಹೊರಟಿರುವುದು ಹಾಗೂ ಕರ್ನಾಟಕ ರಾಜ್ಯಕ್ಕೆ ನೆರೆ ಪರಿಹಾರ, ಜಿ.ಎಸ್.ಟಿ ತೆರಿಗೆಯಿಂದ ಬರಬೇಕಾದ ಪರಿಹಾರದ ಹಣವನ್ನು ನೀಡದೇ ಮಲತಾಯಿ ಧೋರಣೆ ಮಾಡುತ್ತಿರುವುದು ಮತ್ತು ರಾಜ್ಯದಿಂದ ಗೆದ್ದಂತಹ 25 ಬಿಜೆಪಿ ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತದೆ ಮೌನವಹಿಸಿರುವುದು ತೀವ್ರ ಖಂಡನೀಯ. ಈಗಾಗಲೇ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಕೋವಿಡ್ ನಿರ್ವಹಣೆ ವಿಚಾರದಲ್ಲಾಗಲಿ, ಹಲವು ಜನವಿರೋಧಿ ನೀತಿಗಳ ವಿರುದ್ಧ ಸರ್ಕಾರಕ್ಕೆ ತಾಕೀತು ಮಾಡಿದ್ದು ಕೂಡಲೇ ರಾಷ್ಟ್ರಪತಿಗಳು ಇಂತಹ ಜನವಿರೋಧಿ ಸರ್ಕಾರವನ್ನು ವಜಾಗೊಳಿಸಬೇಕೆಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ. ಪ್ರತಿಭಟನೆಯ ನೇತೃತ್ವವನ್ನು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ಬಿ ಪ್ರಸನ್ನಕುಮಾರ್ , ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎನ್. ರಮೇಶ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅನಿತಾ ಕುಮಾರಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಎ ಸ. ರವಿ ಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೀಶ್ , ರೇಖಾ ರಂಗನಾಥ್ , ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ಬಿ ಲೋಕೇಶ್ ಈಟಿ ನಿತಿನ್ , ಎಸ್ .ಕುಮರೇಶ್ ,ವಿನೋದ್ ಕುಮಾರ್, ಅಫ್ತಾಬ್ ಅಹ್ಮದ್ , ನಯಾಜ್, ಯುವ ಕಾಂಗ್ರೆಸ್ ಮುಖಂಡರಾದ ಟಿ.ವಿ ರಂಜಿತ್ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಶಶಿಕುಮಾರ್ ಸಿರಿಗೆರೆ, ಜಿಲ್ಲಾ ಪದಾಧಿಕಾರಿಗಳಾದ ಉಮೇಶ್ ಬಾಳೆಗುಂಡಿ, ಕಲೀಮ್ ಮಹಮ್ಮದ್ ಪುಷ್ಪಕ್ ಕುಮಾರ್, ಸಚಿನ್ ಸಿಂದೆ ವೆಂಕಟೇಶ್ ಕಲ್ಲೂರ್, ಸುಭಾಸ್ ಗೌಡ , ಶರತ್ ಹೊಸಮನೆ , ಶಿವಕುಮಾರ್ , ಸಂಜಯ್ ಸೊರಬ , ಗೋಪಿ ಚೌಕಿ ,ಶರವಣ ಬೊಮ್ಮನಕಟ್ಟೆ , ಕಾಂತ ರಾಜ್ , ಸಂದೀಪ್ ಸುಂದರ್ ರಾಜ್ , ಮಲ್ಲಿ ಚಟ್ಪಟ್ ನಗರ, ರಾಕೇಶ್ ಪವನ್, ದೇವರಾಜ್, ಇರ್ಫಾನ್ , ಸಂತೋಷ್, ಅಕ್ಬರ್, ಭದ್ರಾವತಿ ತಬ್ರೇಜ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಸುವರ್ಣ ನಾಗರಾಜ್, ನಳಿನ ದಾಮೋದರ, ಗೀತಾ, ವಿಜಯಲಕ್ಷ್ಮಿ, ಪುಷ್ಪಲತಾ ರವೀಂದ್ರ, ಆಶಾ, ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153