ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023ನೇ ಸಾಲಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುಗಳು ಅಸಾಧಾರಣ ಪ್ರತಿಭೆಯನ್ನು ತೋರುವಲ್ಲಿ ತರಬೇತುಗೊಳಿಸಿರುವ ರಾಜ್ಯದ ತರಬೇತುದಾರರುಗಳಿಗೆ ನೀಡುವ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ನೀಡುವ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಆಸಕ್ತರಿಂದ ಆನ್‌ಲೈನ್ ಅರ್ಜಿ ಅಹ್ವಾನಿಸಿದೆ.
ಆಸಕ್ತರು ಸೇವಾಸಿಂದು http://sevasindhuservices.karnataka.gov.in ಪೋರ್ಟಲ್ ಮೂಲಕ ಸೆ. 20 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ ಇವರನ್ನು ಸಂಪರ್ಕಿಸುವುದು.

ವರದಿ ಪ್ರಜಾ ಶಕ್ತಿ