ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಮ್ಯಾಕ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಕ್ಕದಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣವನ್ನು ಅಭಿವೃದ್ಧಿ ಪಡಿಸಿದ್ದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್ ಸಿ ಯೋಗೇಶ್ ರವರು ಉದ್ಘಾಟಿಸಿದರು.
ಮಹಾನಗರ ಪಾಲಿಕೆ ಸದಸ್ಯರಾಗಿದ್ದ ಸಂದರ್ಭದಲ್ಲಿ ಸುಮಾರು ಮೂರು ಲಕ್ಷ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಿದ್ದು ಈಗ ಪ್ರಾರಂಭಗೊಂಡಿದೆ. ಈ ಸಂದರ್ಭದಲ್ಲಿ ಮಾಜಿ ಮಹಾನಗರ ಪಾಲಿಕೆ ಮಹಾಪೌರರಾದ ನಾಗರಾಜ್ ಕಂಕಾರಿ ರವರು, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ಅವರು, ಸರ್ಜಿ ಆಸ್ಪತ್ರೆ ಮಾಲೀಕರಾದ ಶ್ರೀಮತಿ ನಮಿತಾ ಧನಂಜಯ್ ಸರ್ಜಿ ರವರು, ಜಯನಗರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಸಿದ್ದನಗೌಡರವರು, ಪ್ರಮುಖರಾದ ಒಡೆಯರ್ , ಡಾ. ಜಯಂತ್ , ಕಾಂಗ್ರೆಸ್ ಪಕ್ಷದ ಮುಖಂಡರಾದ ಡಾ. ದಿನೇಶ್ ಹಾಗೂ ಆಟೋ ಚಾಲಕರು, ಸಾರ್ವಜನಿಕರು ಉಪಸ್ಥಿತರಿದ್ದರು.