ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕೇವಲ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗದೇ ನಾಗರಿಕರು, ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.


ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಚರ್ಚಿಸಲು ವಿವಿಧ ಸಂಘ ಸಂಸ್ಥೆಗಳ ಮುಖಂಡರೊAದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ಜನರಿಂದ ಜನರಿಗಾಗಿ ಇರುವ ಒಂದು ವ್ಯವಸ್ಥೆಯಾಗಿದ್ದು ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ ಹಾಕಿದ್ದು, ಸಂವಿಧಾನದ ಕುರಿತು ಅರಿವು ಮೂಡಿಸಲು ಸೆ.15 ರಂದು ರಾಜ್ಯಾದ್ಯಂತ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಾನವ ಸರಿಪಳಿ ರಚಿಸುವ ಮೂಲಕ ಆಚರಿಸಲಾಗುತ್ತಿದೆ.


ಜಿಲ್ಲೆಯಲ್ಲಿ ಭದ್ರಾವತಿ ತಾಲ್ಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲ್ಲೂಕಿನ ಮಡಿಕೆಚೀಲೂರು ವರೆಗೆ 8 ಗ್ರಾ.ಪಂ ವ್ಯಾಪ್ತಿ, ಸ್ಥಳೀಯ ಸಂಸ್ಥೆಗಳು, ನಗರ ವ್ಯಾಪ್ತಿಯನ್ನು ಒಳಗೊಂಡು ಒಟ್ಟು 60 ಕಿ.ಮೀ ಮಾನವ ಸರಪಳಿ ರಚಿಸಲು ಸಿದ್ದತೆಯನ್ನು ನಡೆಸಲಾಗಿದೆ. ಇದು ಕೇವಲ ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗದೆ ವಿದ್ಯಾರ್ಥಿಗಳು, ನಾಗರೀಕರು, ಸ್ತಿçÃಶಕ್ತಿ ಗುಂಪುಗಳು, ವಿವಿಧ ಸಂಘ ಸಂಸ್ಥೆಗಳು ಈ ಸಂಭ್ರಮದಲ್ಲಿ ಭಾಗವಹಿಸಬೇಕು ಎಂದರು.


ವಿವಿಧ ಕಲಾಮೇಳದೊಂದಿಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸ್ತಿçÃಶಕ್ತಿ, ಸ್ವಸಹಾಯ ಮಹಿಳಾ ಗುಂಪುಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳು, ಸರ್ಕಾರಿ ಅಧಿಕಾರಿ, ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್ಸ್ ಗೈಡ್ಸ್, ಎನ್‌ಎಸ್‌ಎಸ್, ಎನ್‌ಸಿಸಿ ಅಭ್ಯರ್ಥಿಗಳು ಎಲ್ಲ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಸೇರಿ ಮಾನವ ಸರಪಳಿ ನಿರ್ಮಿಲಾಗುವುದು.
ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮಹತ್ವವನ್ನು ಇಂದಿನ ಯುವ ಪಿಳಿಗೆಗೆ ತಿಳಿಸುವುದು ಹಾಗೂ ಪ್ರತಿಯೊಬ್ಬರಿಗೂ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದೆ. ಸಮಾಜದ ಪ್ರತಿಯೊಬ್ಬರು ಸಂವಿಧಾನಕ್ಕೆ ಬದ್ದರಾಗಿ ಜವಾಬ್ದಾರಿಯಿಂದ ಪ್ರಜಾಪ್ರಭುತ್ವದ ರೂವಾರಿಗಳಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆಗಳು, ಸಂಸ್ಥೆಗಳ ಮುಖಂಡರಿAದ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಸಲಹೆಗಳನ್ನು ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೋಭಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ತಾಲೂಕು ಸಹಾಯಕ ನಿರ್ದೇಶಕರಾದ ಸುರೇಶ್ ಹಾಗೂ ವಿವಿಧ ಸಂಘ ಸಂಸ್ಥೆಯ ಪಧಾದಿಕಾರಿಗಳು ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ