ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನು
ಸೆ. 10 ರಿಂದ ಏರ್ಪಡಿಸಲಾಗಿದೆ.
ಸೆಪ್ಟೆಂಬರ್ 10 ರಂದು ನೆಹರು ಕ್ರೀಡಾಂಗಣದಲ್ಲಿ, ಸೆಪ್ಟೆಂಬರ್ 14 ರಂದು ನೆಹರೂ ಮೈದಾನ, ಸಾಗರದಲ್ಲಿ, ಸೆಪ್ಟೆಂಬರ್ 15 ರಂದು ವಿ.ಐ.ಎಸ್.ಎಲ್ ಕ್ರೀಡಾಂಗಣ ಭದ್ರಾವತಿ ಮತ್ತು ಸೊರಬ ತಾಲ್ಲೂಕಿನ ಆನವಟ್ಟಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣ, ಸೆಪ್ಟೆಂಬರ್ 17 ರಂದು ತಾಲ್ಲೂಕು ಕ್ರೀಡಾಂಗಣ ಶಿಕಾರಿಪುರ ಮತ್ತು ತಾಲ್ಲೂಕು ಕ್ರೀಡಾಂಗಣ ಹೊಸನಗರದಲ್ಲಿ, ಸೆಪ್ಟೆಂಬರ್ 18 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ತೀರ್ಥಹಳ್ಳಿಯಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ನಿಯಮಗಳು:
ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಮಾತ್ರ ಏರ್ಪಡಿಸಲಾಗುವುದು. ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ / ಆಯ್ಕೆ ತಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.
ಆಯಾ ತಾಲ್ಲೂಕಿನ ಕ್ರೀಡಾಪಟುಗಳು ಆಯಾ ತಾಲ್ಲೂಕಿನಲ್ಲಿ ಮಾತ್ರ ಭಾಗವಹಿಸಲು ಅರ್ಹತೆ ಹೊಂದಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಮೂಲ ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿರುತ್ತದೆ. ಬೇರೆ ತಾಲ್ಲೂಕಿನ ಆಟಗಾರರು ಭಾಗವಹಿಸಬೇಕಾದರೆ ಆ ತಾಲ್ಲೂಕಿನಲ್ಲಿ ಅವರು ಶಿಕ್ಷಣ ಪಡೆಯುತ್ತಿರಬೇಕು. ಒಂದು ವೇಳೆ ಬೇರೆ ತಾಲ್ಲೂಕಿನ ಆಟಗಾರರನ್ನು ಆಡಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ತೆಗೆದು ಹಾಕಲಾಗುವುದು.


ಸ್ಪರ್ಧೆಯನ್ನು ಏರ್ಪಡಿಸಲು ಕನಿಷ್ಠ 4 ತಂಡಗಳು ಇರಬೇಕು. ಇಲ್ಲದಿದ್ದಲ್ಲಿ ಆಯ್ಕೆ ನಡೆಸಿ ಮುಂದಿನ ಹಂತಕ್ಕೆ ಕಳುಹಿಸಲಾಗುವುದು. ಒಬ್ಬರಿಗೆ ಎರಡು ವೈಯಕ್ತಿಕ ಹಾಗೂ ಒಂದು ಗುಂಪು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.
ಬೆಳಿಗ್ಗೆ 11-00 ಗಂಟೆಯೊಳಗಾಗಿ ನೋಂದಾವಣೆ ಮಾಡಿಕೊಂಡವರಿಗೆ ಮಾತ್ರ ಆಟವಾಡುವ ಅವಕಾಶ ಮತ್ತು ಮಧ್ಯಾಹ್ನದ ಲಘು ಉಪಹಾರದ ವ್ಯವಸ್ಥೆ ಇರುತ್ತದೆ.
ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ವಿರೋಧಿಸಿದ ತಂಡದ ನಾಯಕನಿಗೆ ಒಂದು ಬಾರಿ ಜೂರಿ ಕಮಿಟಿಗೆ ಮನವಿ ಸಲ್ಲಿಸಲು ಅವಕಾಶವಿರುತ್ತದೆ. ಇದರ ಹೊರತು ಗಲಾಟೆ ನಡೆಸುವ ತೀರ್ಪನ್ನು ವಿರೋಧಿಸುವ ತಂಡಗಳನ್ನು ತೆಗೆದುಹಾಕಲಾಗುವುದು.


ಕ್ರೀಡಾಕೂಟದ ಸ್ಪರ್ಧೆಗಳನ್ನು ಪ್ರತ್ಯೇಕವಾಗಿ ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲಾಗುವುದು. ಸಮಯಕ್ಕೆ ಸರಿಯಾಗಿ ಹಾಜರಿರದ ತಂಡಗಳನ್ನು ನಿರ್ದಾಕ್ಷಿಣ್ಯವಾಗಿ ತೆಗೆದು ಹಾಕಲಾಗುವುದು.
ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ನಡೆಸಲಿದ್ದು, ಸದರಿ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ನಿಗದಿಪಡಿಸಿದ ದಿನಾಂಕದAದು 10.00 ಘಂಟೆಯೊಳಗಾಗಿ ಕ್ರೀಡಾಕೂಟ ನಡೆಯುವ ಕ್ರೀಡಾಂಗಣದಲ್ಲಿ ಸಂಬAಧಪಟ್ಟವರಲ್ಲಿ ವರದಿ ಮಾಡಿಕೊಂಡು ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಶಿವಮೊಗ್ಗ ಇವರು ಪ್ರಕಟಣೆ ತಿಳಿಸಿದ್ದಾರೆ.

ವರದಿ ಪ್ರಜಾ ಶಕ್ತಿ