ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು.
ದಿ: 01-08-2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಅರ್ಜಿ ಸಲ್ಲಿಸುವವರು ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ(ಇAಟೆಲಿಜೆನ್ಸ್ ರಿಪೋರ್ಟ್) ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
ಮಕ್ಕಳ ದಿನಾಚರಣೆ -2024 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದುಕೊಂಡು ದಿ: 24-09-2024 ರೊಳಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.