ಬೆಳಗಾವಿಯ ಸುವರ್ಣಸೌಧದಲ್ಲಿ “ಬೆಳಗಾವಿ ವಿಭಾಗ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು.
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ “ಸರ್ಕಾರಿ ಶಾಲೆಗಳ ಸುಧಾರಣೆಗೆ” ಕೈಗೊಳ್ಳಬೇಕಾದ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
“ಸಭೆಯಲ್ಲಿ ಚರ್ಚಿಸಲಾದ ವಿಷಯಗಳು”
♦️ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸುವ ಕುರಿತು.
♦️ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಕುರಿತು.
♦️ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸುವ ಕುರಿತು.
♦️ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು.
♦️ ಶಿಕ್ಷಕರಿಗೆ ತರಬೇತಿ ನೀಡುವ ಕುರಿತು.
♦️ ಮಕ್ಕಳ ಗೈರು ಹಾಜರಿ ಬಗ್ಗೆ ಗಮನಹರಿಸಿ, ಶಾಲೆಗೆ ಕರೆತರುವ ಕುರಿತು.
♦️ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಆರಂಭಿಸುವ ಕುರಿತು.
♦️ ಸರ್ಕಾರಿ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ಕುರಿತು.
♦️ ಪಠ್ಯಪುಸ್ತಕ/ಸಮವಸ್ತ್ರ/ಶೂ-ಸಾಕ್ಸ್ ಗಳನ್ನು ಶಾಲಾ ಪ್ರಾರಂಭದ ಅವಧಿಯಲ್ಲಿ ಏಕಕಾಲಕ್ಕೆ ಪೂರೈಸುವ ಕುರಿತು.
♦️ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ರಜಾ ದಿನಗಳಲ್ಲಿ ಕೈಗೊಳ್ಳುವ ಕುರಿತು.
♦️ಸರ್ಕಾರಿ ಶಾಲೆಗಳ ಕೊಠಡಿಗಳ ದುರಸ್ತಿ ಕಾಮಗಾರಿ ಮತ್ತು ಶೌಚಾಲಯ ನಿರ್ಮಾಣ ಕಾರ್ಯ ಕುರಿತು.
ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಶ್ರೀಮತಿ ಬಿ.ಬಿ ಕಾವೇರಿ, ಪದವಿಪೂರ್ವ ನಿರ್ದೇಶಕರಾದ ಶ್ರೀಮತಿ ಸಿಂಧು ಬಿ ರೂಪೇಶ್ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದರು.