ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ನೂತನ ಶ್ರೀ ಭಗೀರಥ ಜಿಲ್ಲಾ ಸಹಕಾರ ಸಂಘದ ಸಮಾರಂಭವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕದಲ್ಲಿ ಮತ್ತು ಜಿಲ್ಲೆಯಲ್ಲಿ ಭಗೀರಥ ಸಮಾಜದವರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಈಗ ಬಂದಿದ್ದಾರೆ.ಸಮಾಜಕ್ಕೆ ಅನುಕೂಲವಾಗುವಂತೆ ಸಹಕಾರ ಸಂಘವನ್ನು ಪ್ರಾರಂಭ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಕೆಲಸಗಳನ್ನು ಮಾಡಲಿ ಎಂದು ಆಶಿಸಿದರು. ಈ ಸಮಯದಲ್ಲಿ ಅವಧಿಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿಭಾಗದಲ್ಲಿ ಅತಿ ಹೆಚ್ಚಿನ ಅಂಕಗಳಿಸಿ ತೇರ್ಗಡೆಯಾದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಸುವರ್ಣ ಸಂಭ್ರಮಕ್ಕೆ ಕಾಲಿಟ್ಟ ಸಮುದಾಯದ ದಂಪತಿಗಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀ ಮಂಜುನಾಥ್ ಅವರು, ಶಾಸಕರಾದ ಶ್ರೀ ಶಾರದಾ ಪೂರ್ಯ ನಾಯಕ್ ಅವರು, ಕ್ರಾಂತಿ ದೀಪ ಮಂಜುನಾಥ್ ಅವರು ,ಶ್ರೀ ಜಗನ್ನಾಥ ಸಾಗರ್ ಅವರು, ಶ್ರೀ ಬಿಲ್ಲಪ್ಪ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.