ಭಾರತೀಯ ಜನತಾ ಪಾರ್ಟಿಯ ಹೊಳೆಹೊನ್ನೂರು ಯುವ ಮೋರ್ಚಾ ವತಿಯಿಂದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಮಾರಶೆಟ್ಟಿ ಹಳ್ಳಿಯ ಪ್ರಾಥಮಿಕ ರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ, ಹೊಳೆಹೊನ್ನೂರು ಮಂಡಲ ಅಧ್ಯಕ್ಷರಾದ ಮಲ್ಲೇಶಪ್ಪ, ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಪಟೇಲ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಹರ್ಷಿತಾ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು, ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *