ವಿಧಾನಸೌಧದಲ್ಲಿ ಅರಣ್ಯ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಮಧು ಬಂಗಾರಪ್ಪನವರು ಪಾಲ್ಗೊಂಡು ”ಕಸ್ತೂರಿ ರಂಗನ್ ವರದಿ” ಕುರಿತಂತೆ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಸಮಗ್ರವಾಗಿ ಚಿಂತನ-ಮಂಥನ ನಡೆಸಲಾಯಿತು.

ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದ್ದು, ಅರಣ್ಯ ಪ್ರದೇಶದ ಈ ಭಾಗಗಳಲ್ಲಿ ಹಲವು ತಲೆಮಾರುಗಳಿಂದ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಇದರಿಂದ ಆ ಭಾಗದ ಜನರ ಬದುಕೇ ದುಸ್ತರವಾಗುತ್ತದೆ. ಬಫರ್ ವಲಯವನ್ನು ಶೂನ್ಯಕ್ಕೆ ತರಬೇಕು ಎಂದು ಸಲಹೆ ನೀಡಿದರು.

ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ತನ್ನ ನಿಲುವನ್ನು ಕೇಂದ್ರಕ್ಕೆ ಹಲವು ಬಾರಿ ಸ್ಪಷ್ಟಪಡಿಸಿದೆ. ಮತ್ತೊಮ್ಮೆ ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರೊಂದಿಗೆ ಸಮಾಲೋಚನೆ ನಡೆಸಿ ಕೇಂದ್ರಕ್ಕೆ ಅಭಿಪ್ರಾಯ ತಿಳಿಸಲಾಗುವುದು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೆ.ಜೆ ಜಾರ್ಜ್, ಶ್ರೀ ಡಾ. ದಿನೇಶ್ ಗುಂಡೂರಾವ್, ಶ್ರೀ ಮಂಕಾಳ್ ವೈದ್ಯ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ