ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿದ್ದ ಶಶಿಕಲಾ ಜೊಲ್ಲೆಯವರು ಮಕ್ಕಳು ಹಾಗೂ ಮಹಿಳೆಯರಿಗೆ ಅಪೌಷ್ಠಿಕತೆಯನ್ನು ದೂರ ಮಾಡಲು ಸರ್ಕಾರದಿಂದ ಉಚಿತವಾಗಿ ನೀಡುವ ಮೊಟ್ಟೆ ನೀಡುವ ಟೆಂಡರ್ ಹಂಚಿಕೆಯಲ್ಲಿ ಲಂಚ ಪಡೆದಿರುವುದು ಸ್ಪಷ್ಟವಾಗಿ ಜಗಜ್ಜಾಹೀರಾದ ನಂತರವೂ ನಿನ್ನೆ ನಡೆದ ನೂತನ ಸಚಿವ ಸಂಪುಟದಲ್ಲಿ ಶಶಿಕಲಾ ಜೊಲ್ಲೆ ಅವರಿಗೆ ಸಚಿವ ಸ್ಥಾನ ನೀಡಿರುವುದು. ಬಿಜೆಪಿ ಪಕ್ಷದ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ. ಬಿಜೆಪಿ ಎಂದರೆ ಭ್ರಷ್ಟಾಚಾರ ಜನತಾ ಪಾರ್ಟಿ ಎನ್ನುವುದನ್ನು ರಾಜ್ಯದ ಜನತೆಗೆ ಮನವರಿಕೆ ಮಾಡಿಕೊಟ್ಟಿದ್ದೆ. ನೂತನ ಮುಖ್ಯಮಂತ್ರಿಯವರು ಅಧಿಕಾರ ವಹಿಸಿಕೊಂಡ ನಂತರ ಭ್ರಷ್ಟಾಚಾರಕ್ಕೆ ಲಗಾಮು ಬೀಳುತ್ತದೆ ಎಂಬ ಜನರ ನಿರೀಕ್ಷೆ ಸುಳ್ಳಾಗಿ ಮುಖ್ಯಮಂತ್ರಿ ಕೂಡ ಭ್ರಷ್ಟಾಚಾರಿಗಳೇ ಪರವಾಗಿ ನಿಂತಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇವೆ ಈ ಕೂಡಲೇ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಯಬೇಕಾಗಿ ಮನವಿ ಮಾಡುತ್ತಿದ್ದೇವೆ.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153