ಇತ್ತಿಚಿಗೆ ಆತ್ಮಹತ್ಯೆಗೆ ಶರಣಾಗಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಮೊಗ್ಗ ನಿವಾಸಿ ದಿವಂಗತ ಚಂದ್ರಶೇಖರನ್ ಪಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಆ ವೇಳೆ ಅವರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಹಾಗೂ ಸರ್ಕಾರದಿಂದ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದೆನು.

ಅದರಂತೆ ಈ ವಿಚಾರವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಗಮನಕ್ಕೆ ತಂದು ಅವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿದ್ದೆನು.

ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಮೃತರ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ಕುಟುಂಬಕ್ಕೆ 25 ಲಕ್ಷರೂಪಾಯಿಗಳ ಸಹಾಯಧನವನ್ನು ನೀಡಿದ್ದಾರೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಷೇಧ ಕಾಯ್ದೆಯಡಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುವ ಹಿನ್ನಲೆಯಲ್ಲಿ 8.25 ಲಕ್ಷ ರೂಗಳನ್ನು ದಿವಂಗತ ಚಂದ್ರಶೇಖರನ್ ಪಿ ಇವರ ಪತ್ನಿ ಶ್ರೀಮತಿ ಕವಿತಾ ಅವರಿಗೆ ಈಗಾಗಲೇ ಮಂಜೂರು ಮಾಡಿದ್ದಾರೆ.

ದಿವಂಗತ ಚಂದ್ರಶೇಖರನ್ ಪಿ ಇವರಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಿಂದ ಪಾವತಿಸಬೇಕಾದ ಸಂಬಳ ಮತ್ತು ರಜೆಗೆ ಸಂಬಂಧಿಸಿದಂತೆ 1,41,361 ರೂಗಳನ್ನು ಪತ್ನಿ ಶ್ರೀಮತಿ ಕವಿತಾರವರ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ.

ಮೃತರ ಮಗನಿಗೆ ಉದ್ಯೋಗ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ, ಈ ಕುರಿತು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭೋವಿ ನಿಗಮದ ಅಧ್ಯಕ್ಷರಾದ ಶ್ರೀ ರವಿ ಕುಮಾರ್ ಎನ್, ಶಾಸಕರಾದ ಶ್ರೀ ಚನ್ನಬಸಪ್ಪ (ಚನ್ನಿ) ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *