ಶ್ರೀ ಪರಮೇಶ್ವರ್, 32 ವರ್ಷ,ಸಾಗರ ಟೌನ್ ರವರು ಸಾಗರ ಪೇಟೆಯ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದಾಗ ಇಟ್ಟುಕೊಂಡಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಸಾಗರ ಟೌನ್ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0188/2024 ಕಲಂ 303(2) ಬಿಎನ್ಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಸದರಿ ಪ್ರಕರಣದಲ್ಲಿ ಆರೋಪಿ ಮತ್ತು ಕಳುವಾದ ಮಾಲಿನ ಪತ್ತೆಗಾಗಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಶ್ರೀ ಕಾರಿಯಪ್ಪ ಎ ಜಿ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಶ್ರೀ ಗೋಪಾಲಕೃಷ್ಣ ಟಿ ನಾಯಕ್ ಪೊಲೀಸ್ ಉಪಾಧೀಕ್ಷಕರು ಸಾಗರ ಉಪವಿಭಾಗ ಸಾಗರ ರವರ ಮೇಲ್ವಿಚಾರಣೆಯಲ್ಲಿ ಶ್ರೀ ಜೆ ಬಿ ಸೀತಾರಾಮ್ ಪೊಲೀಸ್ ನಿರೀಕ್ಷಕರು ಸಾಗರ ಪೇಟೆ ಠಾಣೆ ರವರ ನೇತೃತ್ವದಲ್ಲಿ ಪಿಎಸ್ಐ ರವರುಗಳಾದ ನಾಗರಾಜ ಟಿ.ಎಂ, ಯಲ್ಲಪ್ಪ ಹಿರಗಣ್ಣನವರ, ಟಿ.ಡಿ ಸಾಗರ್ಕರ್ ಹಾಗೂ ಸಿಬ್ಬಂದಿಗಳಾದ ಹೆಚ್ ಸಿ - ಸನಾವುಲ್ಲ, ಪಿಸಿ - ವಿಕಾಸ್, ವಿಶ್ವನಾಥ, ಕೃಷ್ಣಮೂರ್ತಿ ರವರುಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.

ಸದರಿ ತನಿಖಾ ತಂಡವು ಪ್ರರಕಣದ ಆರೋಪಿ ಪರಶುರಾಮ ಕ್ಯಾರಕಟ್ಟಿ, 32 ವರ್ಷ ಸೆಟಲ್ಮೆಂಟ್ ಕಾಲೋನಿ, ಗಂಗಾಧರ ನಗರ, ಹುಬ್ಬಳ್ಳಿ ಧಾರವಾಡ ಈತನನ್ನು ದಸ್ತಗಿರಿ ಮಾಡಿ ಆರೋಪಿತನಿಂದ 1,00,000/- ರೂ ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಪ್ರಶಂಶಿಸಿ ಅಭಿನಂದಿಸಿರುತ್ತಾರೆ.

ವರದಿ ಪ್ರಜಾ ಶಕ್ತಿ