ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ 30 ರವರೆಗೆ ನಡೆದ 23 ವಯೋಮಿತಿಯೊಳಗಿನ 4ನೇ ನ್ಯಾಷನಲ್ ಓಪನ್ ಅಥ್ಲೇಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಜಿಲ್ಲೆಯ ಸುದೀಪ್ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದೀಪ್ ಅಥ್ಲೇಟಿಕ್ ತರಬೇತುದಾರ ಬಾಳಪ್ಪ ಮಾನೆಯವರಿಂದ ತರಬೇತಿ ಪಡೆಯುತ್ತಿದ್ದಾರೆ. ಸುದೀಪ್‌ರವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ಮತ್ತು ಸಿಬ್ಬಂದಿವರ್ಗದವರು ಹಾಗೂ ಜಿಲ್ಲಾ ಅಥ್ಲೇಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ಉದಯ್‌ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *