ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *