ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ.
ಅಗತ್ಯ ಸೇವೆ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲವೂ ಬಂದ್. ಅಂತರ್ ಜಿಲ್ಲಾ ಸಂಚಾರ ಇಲ್ಲವೇ ಇಲ್ಲ. ತುಂಬಾ ಕಟ್ಟುನಿಟ್ಟಿನ ಲಾಕ್ ಡೌನ್ . ಸಾಲ ಪಾವತಿಗೆ 3ತಿಂಗಳ ವಿನಾಯಿತಿ
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ