
ಶಿವಮೊಗ್ಗ ಮಹಾನಗರ ಪಾಲಿಕೆಯು ನಾಡ ದಸರಾ 2024ರ ಪ್ರಯುಕ್ತ ಆಹಾರ ದಸರಾ ಸಮಿತಿ ವತಿಯಿಂದ ನಗರದ ಸಾರ್ವಜನಿಕರಿಗೆ ವಿವಿಧ ಸ್ಥಳಗಳಲ್ಲಿ ವಿವಿಧ ದಿನಾಂಕಗಳAದು ಆಹಾರ ಮೇಳ, ಆಹಾರ ತಿನ್ನುವ ಸ್ಪರ್ಧೆ ಹಾಗೂ ಆಹಾರ ತಯಾರಿಸುವ ಸ್ಪರ್ಧೆಗಳನ್ನು ಏರ್ಪಡಿಸಿದೆ.
ಅ.08 ರಂದು ಸಂಜೆ 6.00 ಕ್ಕೆ ಫ್ರೀಡಂ ಪಾರ್ಕ್ನಲ್ಲಿ ಆಹಾರ ಮೇಳ ಏರ್ಪಡಿಸಲಾಗಿದ್ದು, ಸುಮಾರು 40 ಸ್ಟಾಲ್‌ಗಳನ್ನು ನಿರ್ಮಿಸಿ ಜಿಲ್ಲೆಯ ವಿವಿಧ ಖಾಧ್ಯಗಳ ಪ್ರದರ್ಶನ ಮತ್ತು ಮಾರಾಟ ಸ್ಟಾಲ್‌ಗಳನ್ನು ಆಯೋಜಿಸಲಾಗಿದೆ.
ಅ.09 ರಂದು ಬೆಳಗ್ಗೆ 10.30ರಿಂದ ಶಿವಪ್ಪ ನಾಯಕ ವೃತ್ತದಲ್ಲಿ ಆಹಾರ ತಿನ್ನುವ ಸ್ಪರ್ಧೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಬಾಳೆಹಣ್ಣು ತಿನ್ನುವ ಸ್ಪರ್ಧೆ ಮತ್ತು ಸಾರ್ವಜನಿಕರಿಗೆ ಇಡ್ಲಿ, ಸಾಂಬಾರ್ ತಿನ್ನುವ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಅ.10 ರಂದು ಬೆಳಗ್ಗೆ 10.30ಕ್ಕೆ ನಿಜಲಿಂಗಪ್ಪ ಸಮುದಾಯ ಭವನದಲ್ಲಿ ಆಹಾರ ತಯಾರಿಸುವ ಸ್ಪರ್ಧೆಯಲ್ಲಿ ಅಮ್ಮ ಮಗ ಸೇರಿ ಹೆಸರುಕಾಳು ಉಪಯೋಗಿಸಿ ಆರೋಗ್ಯಕರ ತಿನಿಸನ್ನು ತಯಾಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಆಹಾರ ದಸರಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.