ಶಿವಮೊಗ್ಗದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಜಿಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೋರಿಕೆಯನ್ನು ನಿಮ್ಮ ಎಲ್ಲ ಬೇಡಿಕೆಗಳನ್ನು ಸರ್ಕಾರದ ಸಚಿವರಾದ ಪ್ರಿಯಾಂಕ ಖರ್ಗೆ ರವರ ಜೊತೆ ಮಾತನಾಡಿ ಆದಷ್ಟು ಬೇಗ ನಿಮ್ಮ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಜೊತೆಗೆ ಸೂಕ್ತ ನ್ಯಾಯ ಕೊಡಿಸುವ ಭರವಸೆ ನೀಡಿದರು.

ವರದಿ ಪ್ರಜಾ ಶಕ್ತಿ