ಒಕ್ಕೂಟದ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಕಾರಣಕ್ಕೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಬೆಂಗಳೂರು ಇವರ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿಯ ಧರಣಿಗೆ ಸಂಬಂಧಿಸಿದಂತೆ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿಮ್ಮ ಸಮಸ್ಯೆಗಳನ್ನು ಆದಷ್ಟು ಬೇಗ ಸರ್ಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತೇನೆ.ಜೊತೆಗೆ ಇಲಾಖೆಗೆ ಸಂಬಂಧಪಟ್ಟ ಸಚಿವರಾದ ಪ್ರಿಯಾಂಕ ಖರ್ಗೆ ರವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ಒಕ್ಕೂಟದ ಜಿಲ್ಲಾ ಸಮಿತಿಯ ವತಿಯಿಂದ ಬೇಡಿಕೆಗಳ ಕುರಿತು ಮನವಿ ಪತ್ರ ಸ್ವೀಕರಿಸಿದರು.

ವರದಿ ಪ್ರಜಾ ಶಕ್ತಿ