ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮುಖ್ಯಮಂತ್ರಿ ಶ್ರೀ.ಸಿದ್ಧರಾಮಯ್ಯ ನವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಷ ಎಣ ಸುವ ಅಗತ್ಯವಿಲ್ಲ. ಸುಮಾರು 159 ಕೋಟಿ ರೂ.ಗಳನ್ನು ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳಾದ ಶ್ರೀ.ಸಿದ್ಧರಾಮಯ್ಯರವರು ಹೇಳಿರುವುದು ಸ್ವಾಗತಾರ್ಹ.
ಕರ್ನಾಟಕದ 12ನೇ ಶತಮಾನದಲ್ಲೇ ಸಮಾಜವನ್ನು ಪ್ರತಿಪಾದಿಸಿದ ರಾಜ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಕಾಲದ ಮೈಸೂರು ಸಂಸ್ಥಾನದಲ್ಲಿ ಮೀಸಲಾತಿ ಮಾಡಲಾಗಿತ್ತು. ದಿವಂಗತ ದೇವರಾಜ ಅರಸುರವರು “ಹಾವನೂರು ಆಯೋಗ” ರಚಿಸಿ ಹಿಂದುಳಿದ ವರ್ಗಗಳ ಅಧ್ಯಯನಕ್ಕೆ ಮುನ್ನುಡಿ ಬರೆದರು. ಮಾಜಿ ಮುಖ್ಯಮಂತ್ರಿ ಶ್ರೀ.ಎಂ.ವೀರಪ್ಪ ಮೊಯ್ಲಿರವರು ಮೀಸಲಾತಿ ಮಿತಿಯನ್ನು ಶೇಕಡಾ 73ಕ್ಕೆ ಏರಿಸುವ ಪ್ರಯತ್ನ ಮಾಡಿದ್ದರು. ಹೀಗೆ ಲಾಗಾಯ್ತಿನಿಂದಲೂ ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ, ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಅರ್ಥಿಕ ಮತ್ತು ಶೈಕ್ಷಣಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷ ವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ.
ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ. ಅಹಿಂದ ವರ್ಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜೊತೆಗೆ ನಿರ್ಧಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ. ಜಾತಿಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರುವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ.
ಆದ್ದರಿಂದ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು. ಮೀಸಲಾತಿ ಪರಿಷ್ಕರಣೆ, ಜಾತಿಗಳನ್ನು ಹೊಸ ವರ್ಗಕ್ಕೆ ಸೇರಿಸುವುದು ಅಥವಾ ಕೈಬಿಡುವುದು ಎಲ್ಲಕ್ಕೂ ಸುಪ್ರೀಂಕೋರ್ಟ್ ಯಾವುದಾದರೂ ಸಾಂವಿಧಾನಿಕ ಸ್ಥಾನಮಾನ ಇರುವ ಆಯೋಗದ ದತ್ತಾಂಶವನ್ನು ಕೇಳುತ್ತದೆ. ಇದು ಮಂಡಲ್ ವರದಿ ಅನುಷ್ಟಾನವನ್ನು ಪ್ರಶ್ನಿಸಿದ್ದ ಅರ್ಜಿಯಿಂದ ಹಿಡಿದು ಹಲವಾರು ಪ್ರಕರಣಗಳಲ್ಲಿ ಕಂಡು ಬಂದಿದೆ. ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡು ಬಿಡುಗಡೆ ಮಾಡಬೇಕಾಗಿರುವುದು ಅತ್ಯಾವಶ್ಯಕವಾಗಿದೆ.
ಹಿರಿಯ ನ್ಯಾಯವಾದಿ ಹೆಚ್.ಕಾಂತರಾಜು ಅವರ ನೇತೃತ್ವದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆಗೆ ಅಂಕಿ-ಅಂಶಗಳನ್ನೂ ಸಂಗ್ರಹಿಸಿದ ವಿಧಾನವನ್ನು ತಜ್ಞರ ಸಮಿತಿ ಮತ್ತು ಐ.ಐ.ಎಂ. ಸಂಸ್ಥೆಗಳು ದೃಡೀಕರಿಸಿದೆ ಬಡವರು, ರೈತರು, ಮಹಿಳೆಯರು ದಲಿತರು ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ್ಗ ದವರ ಬಗ್ಗೆ ಅಪಾರವಾದ ಕಾಳಜಿ ಇರುವ ಸದಾ ಸಾಮಾಜಿಕ ನ್ಯಾಯದ ಪರ ಇರುವ ಶ್ರೀ.ಸಿದ್ಧರಾಮಯ್ಯರವರು ಮುಖ್ಯಮಂತ್ರಿಯಾಗಿರುವು ದರಿಂದ ಅವರು ರಾಜ್ಯದ ಏಳು ಕೋಟಿ ಜನರಿಗೂ ಅನುಕೂಲ ಆಗುವಂತಹ ಈ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆ ಮಾಡಬೇಕು.
ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ನಡೆಸುವುದಾಗಿ ವಾಗ್ದಾನ ನೀಡಿತ್ತು ಎನ್ನುವುದನ್ನು ಮರೆಯಬಾರದು. ಕೊಟ್ಟ ಮಾತಿನಂತೆ ಈಗ ಜಾತಿ ಜನಗಣತಿಯ ವರದಿಯನ್ನು ಒಪ್ಪಿ ಬಿಡುಗಡೆ ಮಾಡಿ ‘ನಾವು ನುಡಿದಂತೆ ನಡೆಯುವವರು’ ಎನ್ನುವುದನ್ನು ಸಾಬೀತು ಮಾಡಬೇಕು. ಅಕ್ಟೋಬರ್ 18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿಯ ವರದಿಯನ್ನು ಮಂಡಿಸಿದಾಗ, ಕೆಲವರು ಆಕ್ಷೇಪ ಎತ್ತಿ ಅದನ್ನು ಒಪ್ಪಬೇಕೋ, ಬೇಡವೋ ಎಂದು ನಿರ್ಧರಿಸುವ ಅಭಿಪ್ರಾಯ ಸಂಪುಟ ಸಭೆಯ ಅಧಿಕಾರ.
ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯರವರು ಇದೇ ಅಕ್ಟೋಬರ್ 18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ, ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆಗಾಗಿ ಒತ್ತಾಯಿಸಿ, ದಿನಾಂಕ 16 ಅಕ್ಟೋಬರ್ 2024ರಂದು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ “ಹಕ್ಕೊತ್ತಾಯ ಸಮಾವೇಶ” ಆಯೋಜಿಸುತ್ತಿದ್ದೇವೆ.ಈ ಸಮಾವೇಶದಲ್ಲಿ ನಾಡಿನ ಶೋಷಿತ ಸಮುದಾಯಗಳ ಜನತೆ, ಸಂಘ ಸಂಸ್ಥೆಗಳು ಭಾಗವಹಿಸುತ್ತೇವೆ. ಮನವಿ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರುಗಳಾದ ಕೆ ರಂಗನಾಥ್, ಅಫ್ತಾಬ್ ಫಾರ್ವಿಜ್, ಎಸ್ಎಂ ಶರತ್, ಜಿ.ಡಿ ಮಂಜುನಾಥ್, ಎಂ ಪ್ರವೀಣ್ ಕುಮಾರ್, ಬಿ ಲೋಕೇಶ್ , ಜಗದೀಶ್, ಗುರುಪ್ರಸಾದ್, ಕೆ ಎಲ್ ಪವನ್, ಕೇಶವ, ಮಾಲ್ತೇಶ್ ,ವಿನೋದ್, ಪ್ರದೀಪ್, ವಿನಯ್ ಹಾಗೂ ಇತರರು ಇದ್ದರು.