ಶಿವಮೊಗ್ಗ ಜಿಲ್ಲೆಯಾದ್ಯಂತ COTPA ವಿಶೇಷ ಕಾರ್ಯಾಚರಣೆ ಕೈಗೊಂಡು ಶ್ರೀ ಮಿಥುನ್ ಕುಮಾರ್ ಜಿ ಕೆ, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶದಲ್ಲಿ, ಆಯಾ ಪೊಲೀಸ್ ಉಪಾಧೀಕ್ಷಕರುಗಳ ಮೇಲ್ವಿಚಾರಣೆಯಲ್ಲಿ ಪೊಲೀಸ್ ನಿರೀಕ್ಷಕರು / ಪೊಲೀಸ್ ಉಪ ನಿರೀಕ್ಷಕರುಗಳು ಠಾಣಾ ವ್ಯಾಪ್ತಿಗಳಲ್ಲಿನ ಶಾಲಾ ಕಾಲೇಜುಗಳ ಆವರಣದಿಂದ 100 ಗಜಗಳ ವ್ಯಾಪ್ತಿಯಲ್ಲಿ ಕಾನೂನು ಬಾಹೀರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಪೆಟ್ಟಿ ಅಂಗಡಿ, ಜೆರಾಕ್ಸ್ ಅಂಗಡಿ ಮತ್ತು ಬೇಕರಿಗಳ ಮೇಲೆ ದಾಳಿ ನಡೆಸಿ, ಶಿವಮೊಗ್ಗ – ಎ ಉಪ ವಿಭಾಗದಲ್ಲಿ - 210, ಶಿವಮೊಗ್ಗ – ಬಿ ಉಪ ವಿಭಾಗದಲ್ಲಿ - 75, ಭದ್ರಾವತಿ ಉಪ ವಿಭಾಗದಲ್ಲಿ - 94, ಸಾಗರ ಉಪ ವಿಭಾಗದಲ್ಲಿ – 11, ಶಿಕಾರಿಪುರ ಉಪ ವಿಭಾಗದಲ್ಲಿ – 71 ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ - 51 ಸೇರಿ ಶಿವಮೊಗ್ಗ ಜಿಲ್ಲೆಯಾದ್ಯಂತ ಒಟ್ಟು 512 COTPA ಸ್ಥಳ ದಂಡ ಪ್ರಕರಣಗಳನ್ನು ಹಾಗೂ ಭದ್ರಾವತಿ ಉಪ ವಿಭಾಗದಲ್ಲಿ 3 ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ 02 ಪ್ರಕರಣಗಳು ಸೇರಿ ಒಟ್ಟು 05 ಎಫ್.ಐ.ಆರ್ ಗಳನ್ನು COTPA ಕಾಯ್ದೆಯಡಿಯಲ್ಲಿ ದಾಖಲಿಸಲಾಗಿರುತ್ತದೆ.

ವರದಿ ಪ್ರಜಾ ಶಕ್ತಿ