ಶಿವಮೊಗ್ಗ ನಗರದ ಆಚಾರ್ಯ ತುಳಸಿ ವಾಣಿಜ್ಯ ಕಾಲೇಜು ಶಿವಮೊಗ್ಗ ಇಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮ ಉದ್ದೇಶ ಮಾತನಾಡಿದ ಮಮತಾ ರವರು ಈಗಿನ ಕಾಲೇಜಿನ ವಿದ್ಯಾರ್ಥಿಗಳು ತುಂಬಾ ಬೇಗ ಕೆಟ್ಟ ಅಭ್ಯಾಸಗಳಿಗೆ ತೊಡಗಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ವಯಸ್ಸಿಗೆ ತಕ್ಕಂತೆ ವಿದ್ಯಾಭ್ಯಾಸ ಪೂರೈಸಿ ಮುಂದಿನ ದಿನಗಳಲ್ಲಿ ಸಮಾಜದ ಗಣ್ಯ ವ್ಯಕ್ತಿಯಾಗಿ ಬೆಳೆಯಬೇಕೆಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಪ್ರೊಫೆಸರ್ ಮಮತಾ P R ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಾಗು ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಹೇಮಂತ್ ರಾಜ್ ಅರಸ್ K M,ಜಿಲ್ಲಾ ಸಲಹೆಗಾರರು, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ಆರೋಗ್ಯ ಇಲಾಖೆ,ಶಿವಮೊಗ್ಗ ಇವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, COTPA ಕಾಯ್ದೆ, ಟಿ ಸಿ ಸಿ ಹಾಗೂ ತಂಬಾಕು ಮುಕ್ತ ಯುವ ಅಭಿಯಾನ 2.0 ಉದ್ದೇಶಗಳ ಕುರಿತು ಉಪನ್ಯಾಸ ನೀಡಲಾಯಿತು. ಕಾರ್ಯಕ್ರಮದಲ್ಲಿ ಪ್ರೊಫೆಸರ್ ನಾಗರಾಜ್, ರವಿರಾಜ್ ಜಿಕೆ ಶ್ರೀಮತಿ ಮಂಗಳ, ಕಾಲೇಜಿನ ಉಪನ್ಯಾಸಕರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ