ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಇವರ ವತಿಯಿಂದ ಅ. 28 ರಂದು ಬೆಳಿಗ್ಗೆ 10.00 ಕ್ಕೆ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರವiದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ನೆರವೇರಿಸುವರು.
ಮುಖ್ಯ ಅಥಿತಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಮಂಜುನಾಥ್ ನಾಯಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ಹನುಮಂತಪ್ಪ ಕೆ.ಟಿ ಪಾಲ್ಗೊಳ್ಳುವರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಮಂಜುನಾಥ್ ಚೌದರಿ ಎಂ.ಹೆಚ್ ವಹಿಸುವರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್, ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಎನ್. ಮೃತ್ಯುಂಜಯ ನಡೆಸಿಕೊಡಲಿದ್ದಾರೆ.