ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಂಪು ನಗರದಲ್ಲಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಶ್ರೀ ಸುರೇಶ್ ಎಂ, ಪೊಲೀಸ್ ಉಪಾಧಿಕ್ಷಕರು, ಶಿವಮೊಗ್ಗ-ಬಿ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ ಶ್ರೀ ಸತ್ಯನಾರಾಯಣ. ವೈ ಪೊಲೀಸ್ ನಿರೀಕ್ಷಕರು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂಧಿಗಳ ತಂಡವು ದಾಳಿ ನಡೆಸಿ, ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳಾದ 1)ಭರತ್ ಟಿ @ ಜಾನ್ ಭರತ್, 27 ವರ್ಷ, ಬಸವನಗುಡಿ ಶಿವಮೊಗ್ಗ ಮತ್ತು 2) ನರಸಿಂಹ ಎಸ್ @ ದಾಸ, 39 ವರ್ಷ, ರಾಗಿಗುಡ್ಡ ಶಿವಮೊಗ್ಗ ರವರುಗಳನ್ನು ದಸ್ತಗಿರಿ ಮಾಡಿ, ಸದರಿ ಆರೋಪಿತರಿಂದ ಅಂದಾಜು ಮೌಲ್ಯ 28,000/- ರೂಗಳ 668 ಗ್ರಾಂ ತೂಕದ ಒಣ ಗಾಂಜಾ ಮತ್ತು ರೂ 400/- ನಗದು ಹಣವನ್ನು ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0300/2024 ಕಲಂ 20(b) (ii) A, 8(c) NDPS ಕಾಯ್ದೆ ರೀತ್ಯಾ ಪ್ರಕಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.