ಸೊರಬ ಟೌನ್ ಹಿರೇಶಕುನ ಇಂಡಸ್ಟ್ರಿಯಲ್ ಏರಿಯಾದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ ಶ್ರೀ ಕೇಶವ್, ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ ಹಾಗೂ ಶ್ರೀ ರಾಜಶೇಖರ್ ಸಿಪಿಐ ಸೊರಬ ವೃತ್ತ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ಚಂದನ್ ಪಿ.ಎಸ್.ಐ ಸೊರಬ ಪೊಲೀಸ್ ಠಾಣೆರವರ ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಮನೀಶ್ ಖಾರ್ವಿ, 24 ವರ್ಷ, ಸಾಗರಟೌನ್ ನನ್ನು ದಸ್ತಗಿರಿ ಮಾಡಿ ಅಂದಾಜು ಮೌಲ್ಯ 10,000/- ರೂಗಳ 100 ಗ್ರಾಂ ತೂಕದ ಒಣ ಗಾಂಜಾವನ್ನು, ರೂ 600 ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ವನ್ನು ಅಮಾನತ್ತು ಪಡಿಸಿಕೊಂಡು, ಸೊರಬ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 0129/2024 ಕಲಂ 20(b) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.