ಶಿವಮೊಗ್ಗ ನಗರ ಉಪವಿಭಾಗ -2ರ ಘಟಕ 5 ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕೆಲಸ ಇರುವುದರಿಂದ ನ.14 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಆರ್.ಎಂ.ಎಲ್.ನಗರ, ಮಂಡ್ಲಿ ವೃತ್ತ, ಬೈಪಾಸ್, ಎನ್.ಟಿ.ರಸ್ತೆ, ಮರ‍್ನಮಿಬೈಲು, ಜೆ.ಸಿ.ನಗರ, ಭಾರತಿ ಕಾಲೋನಿ, ಪಂಚವಟಿ ಕಾಲೋನಿ, ಬಿ.ಹೆಚ್.ರಸ್ತೆ, ಪಿಯರ್‌ಲೈಟ್ ಫ್ಯಾಕ್ಟರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೈಸೂರು ಕಿಸಾನ್ ಮಾಲ್ ಸ್ಥಾಪಿಸಲು ಅರ್ಜಿ ಆಹ್ವಾನ
ಶಿವಮೊಗ್ಗ, ನವೆಂಬರ್ 12, (ಕರ್ನಾಟಕ ವಾರ್ತೆ) : ಜಿಲ್ಲಾ ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಗಾಂಧಿಪಾರ್ಕ್ನಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮೈಸೂರು ಕಿಸಾನ್ ಮಾಲ್ ಸ್ಥಾಪಿಸಲು ಆಸಕ್ತ ರೈತ ಉತ್ಪಾದಕ ಸಂಸ್ಥೆಗಳಿAದ ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅರ್ಹ ರೈತ ಉತ್ಪಾದಕ ಸಂಸ್ಥೆಗಳು ನ.27ರೊಳಗಾಗಿ ಕ.ಪ.ಪ್ರೊ.ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9902546944 ನ್ನು ಸಂಪರ್ಕಿಸುವುದು.