ಉತ್ತಮ ನಾಯಕರಿಂದ ದೇಶದ ಸರ್ವಾಂಗೀಣ ಬೆಳವಣಿಗೆ ಸಾಧ್ಯವಾಗಿದ್ದು, ಮಕ್ಕಳು ಮುಂದಿನ ಸಮರ್ಥ ನಾಯಕರಾಗಿ ಹೊರ ಹೊಮ್ಮಬೇಕು. ಅದಕ್ಕೆ ಯುವ ಸಂಸತ್ ಕಾರ್ಯಕ್ರಮ ಸ್ಪೂರ್ತಿಯಾಗಲಿ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಪನಿರ್ದೇಶಕ ಚಂದ್ರಪ್ಪ ಎಸ್ ಗುಂಡಪಲ್ಲಿ ಆಶಿಸಿದರು.


ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಕಾಲೇಜು ವಿಭಾಗ, ಆರ್ಯ ವಿಜ್ಞಾನ ಕಾಲೇಜು ಶಿವಮೊಗ್ಗ ಇವರ ಸಹಯೋಗದೊಂದಿಗೆ ಮಹಾನಗರಪಾಲಿಕೆ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ 2024-25 ನೇ ಸಾಲಿನ ಪದವಿಪೂರ್ವ ಕಸಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಂದಿನ ಮಕ್ಕಳೇ ಮುಂದಿನ ಭವಿಷ್ಯ. ಸರ್ಕಾರ ಇಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿ ದೆಸೆಯಲ್ಲಿಯೇ ಚುನಾವಣಾ ಪ್ರಕ್ರಿಯೆ, ಪ್ರಜಾಪ್ರಭುತ್ವ ವ್ಯವಸ್ಥೆ, ನಾಯಕರನ್ನು ಆಯ್ಕೆ ಪ್ರಕ್ರಿಯೆ ಕುರಿತು ಒಂದು ಪರಿಕಲ್ಪನೆ ನೀಡುತ್ತಿದೆ. ಯುವ ಸಂಸತ್ ಕಾರ್ಯಕ್ರಮದ ಮೂಲಕ ಆಡಳಿತ ವ್ಯವಸ್ಥೆಯ ಬಗ್ಗೆ ತಿಳಿಸಿಕೊಡಲಾಗುತ್ತಿದೆ ಎಂದರು.


ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆಯ ಸೆಕ್ಷನ್ ಅಧಿಕಾರಿ ಸಂತೋಷ್, ವಿದ್ಯಾರ್ಥಿಗಳಿಗೆ ಸದನ ನಡೆಸುವ ಕುರಿತಾದ ನಿಯಮಾವಳಿಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಸಿಇಓ ಎನ್.ಹೇಮಂತ್, ಯುವ ಸಂಸತ್ ಕಾರ್ಯಕ್ರಮದ ಸಂಚಾಲಕ ಪ್ರಭಾಕರ್, ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕ ಕಚೇರಿ ಉಪನಿರ್ದೇಶಕಿ ಪುಷ್ಪಾ ವಿ ಎಂ, ಜಿಲ್ಲಾ ಪ.ಪೂ ಕಾಲೇಜುಗಳ ಉಪನ್ಯಾಸಕ ಸಂಘದ ಅಧ್ಯಕ್ಷ ಯೋಗೀಶ್, ಜಿಲ್ಲಾ.ಸ.ಪ.ಪೂ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಪಂಡರೀನಾಥ್, ಜಿಲ್ಲಾ ರಾಜ್ಯಶಾಸ್ತç ಉಪನ್ಯಾಸಕರ ವೇದಿಕೆ ಅಧ್ಯಕ್ಷ ಘನಶ್ಯಾಮ ಆರ್.ಸಿ, ಆರ್ಯ ವಿಜ್ಞಾನ ಪಿಯು ಕಾಲೇಜಿನ ಕಾರ್ಯದರ್ಶಿ ಎನ್.ರಮೇಶ್, , ಉಪನ್ಯಾಸಕ ರವಿಕುಮಾರ್ ಇತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *