ಮಕ್ಕಳ ದಿನಾಚರಣೆ ಹಾಗೂ ಪಂಡಿತ್ ಶ್ರೀ ಜವಹರಲಾಲ್ ನೆಹರು ಅವರ ಜಯಂತಿ ಅಂಗವಾಗಿ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ “ನಮ್ಮ ಮಕ್ಕಳು ನಮ್ಮ ಭವಿಷ್ಯ” ಕಾರ್ಯಕ್ರಮದಲ್ಲಿ ಮಾತನಾಡಿ ನಮ್ಮ ಮಕ್ಕಳು ಒಳ್ಳೆ ರೀತಿಯಿಂದ ಓದಿ ಮುಂದಿನ ದಿವಸಗಳಲ್ಲಿ ಸಮಾಜದ ಗಣ್ಯ ವ್ಯಕ್ತಿಗಳಾಗಿ ಬೆಳೆಯಬೇಕೆಂದು ಆಶಿಸಿದರು.ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ ಮಗು ಬಂಗಾರಪ್ಪನವರು ಭಾಗವಹಿಸಿದ್ದರು.
ಕಾರ್ಯಕ್ರಮಕ್ಕೂ ಮೊದಲು ಪಂಡಿತ್ ಶ್ರೀ ಜವಹರ ಲಾಲ್ ನೆಹರು ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು.ಬಳಿಕ ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ, ಅವರ ಪ್ರಶ್ನೋತ್ತರಗಳಿಗೆ ಉತ್ತರಿಸಲಾಯಿತು.
ಈ ವೇಳೆ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.