ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ನವೆಂಬರ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ನ. 22 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ನ.25 ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ. ನ.26 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ. ನ.27 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ನಗರಸಭೆ ಸಭಾಂಗಣ, ನ.28 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.