ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಗಳ ಮರು ಸಮೀಕ್ಷೆ ನಡೆಸುತ್ತಿದ್ದು, ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವ, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ ತೆರೆದ ಚರಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವಚ್ಛಗೊಳಿಸುವ, ಶೌಚಾಲಯದ ಮಲಗುಂಡಿಗಳನ್ನು ದೈಹಿಕವಾಗಿ ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವ ಯಾವುದೇ ವ್ಯಕ್ತಿಗಳು ನ.22 ರೊಳಗಾಗಿ ತಮ್ಮ ಹೆಸರನ್ನು ಮಹಾನಗರ ಪಾಲಿಕೆಯಲ್ಲಿ ನೊಂದಾಯಿಸಿಕೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ಮ್ಯಾನ್ಯುವಲ ಸ್ಕ್ಯಾವೆಂಜರ್ ಗಳು ನೊಂದಣಿಗಾಗಿ ತಮ್ಮ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಕುಟುಂಬದ ಸದಸ್ಯರನ್ನೊಳಗೊಂಡ ಭಾವಚಿತ್ರ, ಬ್ಯಾಂಕ್ ಖಾತೆಯ ಪಾಸ್‌ಬುಕ್, ಆಧಾರ್ ಕಾರ್ಡ್ ಪ್ರತಿ, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾರ್ಯ ನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಲಯದ ಸ್ಥಳದ ವಿವರ, ಅಗತ್ಯ ದಾಖಲೆಗಳೊಂದಿಗೆ ಮಹಾನಗರ ಪಾಲಿಕೆಯ ಆರೋಗ್ಯ ಶಾಖೆಯ ಪರಿಸರ ಅಭಿಯಂತರರನ್ನು ಸಂಪರ್ಕಿಸುವುದು.

Leave a Reply

Your email address will not be published. Required fields are marked *