ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟçದ ಸಂಸ್ಕೃತಿಯನ್ನು ಹಾಗೂ ಮಕ್ಕಳಲ್ಲಿನ ವಿಭಿನ್ನ ಪ್ರತಿಭೆಯನ್ನು ಅನಾವರಣಗೊಳಿಸುವುದು ಪ್ರತಿಭಾ ಕಾರಂಜಿ. ಈ ಮಕ್ಕಳ ಸಾಂಸ್ಕೃತಿಕ ಹಬ್ಬ ಯಶಸ್ವಿಯಾಗಲಿ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಆಶಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಇಲ್ಲಿ ಏರ್ಪಡಿಸಲಾಗಿರುವ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಒಂದು ಅತ್ಯುತ್ತಮ ಕಾರ್ಯಕ್ರಮ. ಇಲ್ಲಿ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಎಲ್ಲ ಮಕ್ಕಳು ಗೆಲ್ಲಲು ಸಾಧ್ಯವಿಲ್ಲ. ಆದರೆ ಭಾಗವಹಿಸುವ ಅವಕಾಶವಿದ್ದು ಸ್ಪರ್ಧಾತ್ಮಕವಾಗಿ ಪಾಲ್ಗೊಳ್ಳಬೇಕು. ನಮ್ಮದು ಸಾಂಸ್ಕೃತಿಕ ರಾಷ್ಟ್ರ. ಅದಕ್ಕೆ ಪೂರಕವಾದ ಕಾರ್ಯಕ್ರಮಗಳು ಇಲ್ಲಿ ನಡೆಯಲಿವೆ. ವೈವಿಧ್ಯಮಯ ಸ್ಪರ್ಧೆಗಳು ಮತು ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ಪ್ರಯತ್ನ ಮಾಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.
ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರಣ್ ಮಾತನಾಡಿ, ನಮ್ಮದು ವೈವಿಧ್ಯಮಯ, ಸಾಂಸ್ಕೃತಿಕ ದೇಶ. ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸವನ್ನು ಯುವ ಪೀಳಿಗೆಯು ಮಾಡಬೇಕು. ನಮ್ಮ ಸಂವಿಧಾನದಲ್ಲಿ ಹಕ್ಕಿನ ಜೊತೆ ಜವಾಬ್ದಾರಿಗಳೂ ಇದ್ದು ಅದನ್ನು ಅರಿತು ಮುಂದೆ ಸಾಗಬೇಕು. ಮಕ್ಕಳಲ್ಲಿನ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ಮಕ್ಕಳಲ್ಲಿ ಸಾರ್ವಜನಿಕ ಶಿಷ್ಟಾಚಾರ ಮತ್ತು ಸಂಸ್ಕಾರ ಕಲಿಸುವುದು ನಮ್ಮ ಕರ್ತವ್ಯ. ಪ್ರತಿಭಾ ಕಾರಂಜಿ ಮೂಲಕ ಈ ಕೆಲಸ ಆಗುತ್ತಿದೆ ಎನ್ನಬಹುದು. ಎಲ್ಲ ಮಕ್ಕಳು ಇಂತಹ ವೇದಿಕೆ ಸದುಪಯೋಗ ಪಡೆದು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಹೆಸರು ಮಾಡಬೇಕೆಂದರು.
ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ನಮ್ಮ ಶೈಕ್ಷಣಿಕ ವ್ಯವಸ್ಥೆಯಲ್ಲಿ ಹಿಂದೆಲ್ಲ ಪಠ್ಯೇತರ ಚಟುವಟಿಕೆಗಳು ಹೆಚ್ಚಿತ್ತು. ಈಗ ಕಡಿಮೆ ಆಗುತ್ತಿದೆ. ಓದಿನ ಬಗ್ಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಆದರೆ ಮಕ್ಕಳಿಗೆ ಕ್ರೀಡೆ ಮತ್ತು ಸಾಂಸ್ಕೃತಿಕತೆ ಹಾಗೂ ಸ್ಪರ್ಧಾತ್ಮಕತೆಯನ್ನು ಕಲಿಸಬೇಕಿದೆ ಪ್ರಸ್ತುತ ಕ್ರೀಡಾ ಕ್ಷೇತ್ರದಲ್ಲಿ ಶೇ.65 ರಿಂದ 70 ರಷ್ಟು ಸಾಧನೆ ಮಾಡಿದ್ದೇವೆ.
ಮಕ್ಕಳಿಗೆ ನಮ್ಮ ನೆಲದ ಅಂದರೆ ಮಲೆನಾಡಿನ ಸಾಂಸ್ಕೃತಿಕ ವಿಚಾರದಲ್ಲಿ ತೊಡಗಿಸಬೇಕು ಎಂದ ಅವರು ಸರ್ಕಾರ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಶಿಕ್ಷಣದ ಜೊತೆಗೆ ಉಚಿತ ಊಟ, ಪುಸ್ತಕ, ಮೊಟ್ಟೆ ಇತರೆ ಸೌಲಭ್ಯಗಳನ್ನು ನೀಡುತ್ತಿದೆ ಎಂದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಇಂದಿನ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸುಮಾರು 2000 ವಿದ್ಯಾರ್ಥಿಗಳು ಪಾಲ್ಗೊಂಡಿರುವುದು ಸಂತಸದ ವಿಷಯ. ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಬೇಕು ಎಂದರು.
ಡಿಡಿಪಿಐ ಎಸ್. ಆರ್. ಮಂಜುನಾಥ್ ಮಾತನಾಡಿ, ಸರ್ಕಾರ ಮಕ್ಕಳಲ್ಲಿನ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿಯAತಹ ಉತ್ತಮ ವೇದಿಕೆ ಕಲ್ಪಿಸಿದೆ. ವಿದ್ಯಾರ್ಥಿಗಳು ಅತ್ಯಂತ ಹುಮ್ಮಸ್ಸಿನಿಂದ ಭಾಗವಹಿಸಬೇಕು. ಬಹುಮಾನಕ್ಕಿಂತ ಭಾಗವಹಿಸುವುದು ಮುಖ್ಯ ಎಂದರು.
ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದಿನೇಶ್ ಜಿ.ಎಂ., ಕಸ್ತೂರಬಾ ಪ್ರೌಢಶಾಲೆಯ ಪ್ರಾಂಶುಪಾಲರಾದ ವೆಂಕಟೇಶ್ ಮಾತನಾಡಿದರು.
ಪ್ರತಿಭಾ ಕಾರಂಜಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಿಮಿಕ್ರಿ, ಕ್ಲೇಮಾಡ್ಲಿಂಗ್, ಛದ್ಮವೇಷ, ಆಶುಭಾಷಣ, ಭರತನಾಟ್ಯ, ರಂಗೋಲಿ, ಚರ್ಚಾಸ್ಪರ್ಧೆ, ಕಥೆ ಹೇಳುವುದು, ಕವನ, ಪದ್ಯವಾಚನ, ಪ್ರಬಂಧ ರಚನೆ, ಜಾನಪದ ನೃತ್ಯಮ ಗಝಲ್, ಕವಾಲಿ, ಚಿತ್ರಕಲೆ, ಭಾವಗೀತೆ ಮುಂತಾದ 14 ವಿಭಾಗಕ್ಕೆ ಸೇರಿದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿದ್ದರು.
ಅರಕೆರೆಯ ಪ್ರಾಥಮಿಕ ಶಾಲೆಯ 4ನೇ ತರಗತಿ ಕಾರ್ತೀಕ್ ಹುಲಿ ವೇಷಧಾರಿಯಾಗಿ, ಹೊಳಲೂರು ಆಕ್ಸ್ಫರ್ಡ್ ಶಾಲೆಯ 3ನೇ ತರಗತಿ ಚೇತನ್ ಬಿ.ಕೆ ವೆಂಕಟೇಶ್ವರ ಸ್ವಾಮಿ, ಮಹಾವೀರ ಶಾಲೆಯ 4ನೇ ತರಗತಿ ಸುವ್ರತಾ ವಟುವಾಗಿ, ಆದಿಚುಂಚನಗಿರಿ ಶಾಲೆಯ 4ನೇತರಗತಿ ಸುದೀಕ್ಷ ಆಂಜನೇಯ ಹಾಗೂ ಪ್ಲಾಸ್ಟಿಕ್ ದುಷ್ಪರಿಣಾಮ ಸೇರಿದಂತೆ ವಿವಿಧ ಛದ್ಮವೇಶಧಾರಿಗಳು ಗಮನ ಸೆಳೆದರು.
ಬಿಇಓ ರಮೇಶ್ ಸ್ವಾಗತಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.