ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಸದೃಢರಾಗುವ ಮೂಲಕ ದೇಶದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಕುವೆಂಪು ರಂಗಮAದಿರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಯಶಸ್ವಿ ಅನುಷ್ಠಾನದ ಕುರಿತು ಹಮ್ಮಿಕೊಳ್ಳಲಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ಗ್ರಾಮದ ಎಲ್ಲಾ ಅಗತ್ಯತೆಗಳನ್ನು ಪೂರೈಸಬಹುದಾಗಿದೆ ಎಂದು ಹೇಳಿದರು.
ಈ ಒಂದು ದಿನದ ಕಾರ್ಯಾಗಾರದಲ್ಲಿ ನರೇಗಾ ಯೋಜನೆ, ಸ್ವಚ್ಛ ಭಾರತ್ ಮಿಷನ್ ಯೋಜನೆ, ಸಂಜೀವಿನಿ ಯೋಜನೆ, ಗ್ರಂಥಾಲಯ ಹಾಗೂ ಮಾನಸಿಕ ಒತ್ತಡ ನಿವಾರಣೆ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ, ಪಂಚಾಯಿತ್ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಗ್ರಂಥಪಾಲಕರಿಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಐಎಎಸ್ ಪ್ರೋಬೆಷನರಿ ಅಧಿಕಾರಿ ದೃಷ್ಟಿ ಜೈಸ್ವಾಲ್, ಜಿಲ್ಲಾ ಪಂಚಾಯತ್ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಸಂಪನ್ಮೂಲ ವ್ಯಕ್ತಿಗಳು, ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.