ನಗರದ ಆಶ್ರಯ ಕಚೇರಿಯಲ್ಲಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಆಶ್ರಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕರು ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಯೋಜನೆಗಳ ಬಗ್ಗೆ ಮಾಹಿತಿ ಪಡೆದು, ಬ್ಯಾಂಕುಗಳಿಂದ ಆಶ್ರಯ ಮನೆಗಳ ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪೂರ್ಣಗೊಂಡ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜೊತೆಗೆ ನೀರಿನ ಸಮಸ್ಯೆ ಕರೆಂಟ್ ಕಾಮಗಾರಿ ಮತ್ತು ಬಸ್ ಬಿಡುವ ವಿಷಯಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್, ಆಶ್ರಯ ಸಮಿತಿ ಅಧಿಕಾರಿ ಶಶಿಧರ್ ಮತ್ತು ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.