ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಮಕ್ಕಳ ಕಲ್ಯಾಣಾಧಿಕಾರಿಗಳಿಗೆ ಶಿವಮೊಗ್ಗ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಪೋಕ್ಸೋ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾವನ್ನು ಹಮ್ಮಿಕೊಂಡಿದ್ದು, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ನೋಡಲ್ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆ ರವರು ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಪೊಲೀಸ್ ಅಧಿಕಾರಿ ಸಿಬ್ಬಂಧಿಗಳಿಗೆ ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು.
1) ಮಕ್ಕಳಿಗೆ ಸಂಬಂಧಿಸಿದ ಯಾವುದೇ ದೂರುಗಳು ಬಂದಾಗ, ವಿಳಂಭ ಮಾಡದೇ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವುದು.
2) 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಾಲನೆ ಮಾಡದಂತೆ, ಪ್ರತೀ ಪೊಲೀಸ್ ಠಾಣಾ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಮಕ್ಕಳು ಹಾಗೂ ಪೋಷಕರಲ್ಲಿ ರಸ್ತೆ ಸುರಕ್ಷತೆಯ ಕುರಿತು ಅರಿವು ಮೂಡಿಸಬೇಕು.
3) 1098 ಮಕ್ಕಳ ತುರ್ತು ಸಹಾಯವಾಣಿ ಹಾಗೂ 15100 ಉಚಿತ ಕಾನೂನು ಸೇವೆಗಳ ಸಹಾಯವಾಣಿಯ ಬಳಕೆಯ ಬಗ್ಗೆಪ್ರಚಾರ ಮಾಡಿ ಜಾಗೃತಿ ಮೂಡಿಸುವುದು.
4) ವಲಸೆ, ಭಿಕ್ಷಾಟನೆ ಮತ್ತು ತುಳಿತಕ್ಕೆ ಒಳಗಾದ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಬಗ್ಗೆ ಕ್ರಮ ಕೈಗೊಳ್ಳುವುದು.
5) ತೆರೆದ ಮನೆ ಕಾರ್ಯಕ್ರಮಗಳನ್ನು ನಡೆಸಿ, ಮಕ್ಕಳಿಗೆ ಠಾಣಾ ವೈಖರಿಗಳು ಮತ್ತು ಕಾನೂನಿನ ಬಗ್ಗೆ ಮಾಹಿತಿ ನೀಡುವ ಮೂಲಕ ಮಕ್ಕಳ ಸ್ನೇಹಿ ವಾತಾವರಣವನ್ನು ನಿರ್ಮಿಸಬೇಕು ಎಂದು ಹೇಳಿದರು.
ಸದರಿ ಕಾರ್ಯಕ್ರಮದಲ್ಲಿ, ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಸೋಮಶೇಖರ್ ಸಿ.ಹೆಚ್.ಸಿ, ರಿಪ್ಪನ್ ಪೇಟೆ ಪೊಲೀಸ್ ಠಾಣೆ ರವರು ಪೋಕ್ಸೋ ಕಾಯ್ದೆ, ಮಕ್ಕಳ ರಕ್ಷಣಾ ಕಾಯ್ದೆ, ಬಾಲ್ಯ ವಿವಾಹನ ನಿಷೇಧ ಕಾಯ್ದೆ, ಬಾಲ್ಯ ಕಾರ್ಮಿ ಪದ್ದತಿ ನಿಷೇಧ ಕಾಯ್ದೆ ಗಳ ಬಗ್ಗೆ ಮಾಹಿತಿ ನೀಡಿದ್ದು, ಶ್ರೀಮತಿ ಗಾಯತ್ರ ಮಕ್ಕಳ ರಕ್ಷಣಾಧಿಕಾರಿಗಳು ಮಕ್ಕಳ ರಕ್ಷಣಾ ಘಟಕ ಶಿವಮೊಗ್ಗ ರವರು ಮಕ್ಕಳನ್ನು ದತ್ತು ಪಡೆಯುವ ಪ್ರಕ್ರಿಯೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀ ಬಾಬು ಆಂಜನಪ್ಪ, ಡಿ.ವೈ.ಎಸ್.ಪಿ ಶಿವಮೊಗ್ಗ-ಎ ಉಪ ವಿಭಾಗ ಹಾಗೂ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಹಾಗೂ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಮಕ್ಕಳ ಕಲ್ಯಾಣಾಧಿಕಾರಿಗಳು ಭಾವಗಹಿಸಿದ್ದರು.