ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಶಿವಮೊಗ್ಗಕ್ಕೆ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಸನ್ಮಾನಿಸಿದರು.
ಸೆಪ್ಟೆಂಬರ್ 15ರಂದು ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಬೀದರ್ ನಿಂದ ಚಾಮರಾಜನಗರದವರೆಗೆ ಸುಮಾರು 2500ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ ಹಾಗೂ 19 ಲಕ್ಷ ಸಸಿ ನೆಡುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯು ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದಿರುವುದು ಹೆಮ್ಮೆಯ ಸಂಗತಿ, ನಮ್ಮ ಜಿಲ್ಲೆಯ ಗೌರವ ಹೆಚ್ಚಿಸುವುದಕ್ಕೆ ಶ್ರಮಿಸಿದ ಪ್ರತಿಯೊಬ್ಬರಿಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಅಭಿನಂದನೆ ಸಲ್ಲಿಸಿದ್ದಾರೆ.