ಶಿವಮೊಗ್ಗ ಜಿಲ್ಲಾ ಕೃಷಿ ತಂತ್ರಜ್ಞರ ಸಂಸ್ಥೆ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಇವರ ಸಹಯೋಗದಲ್ಲಿ ಹಳ್ಳಿಕೆರೆ ಕೃಷಿ ಫಾರಂನಲ್ಲಿ ಹಮ್ಮಿಕೊಂಡಿದ್ದ ಕೃಷಿಯಲ್ಲಿ ಸಂಪನ್ಮೂಲಗಳ ಸದ್ಬಳಕೆ ಎಂಬ ವಿಚಾರ ಸಂಕಿರಣವನ್ನು ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಸಿ ಲೋಕೇಶ್ವರ ಗಿಡಕ್ಕೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿದರು.
ಜಿಲ್ಲಾ ಉಪನಿರ್ದೇಶಕರಾದ ಮಂಜುಳಾ, ತರಬೇತಿ ಕೇಂದ್ರದ ಮುಖ್ಯಸ್ಥರಾದ ಮಮತಾ, ಸಹಾಯಕ ಕೃಷಿ ಅಧಿಕಾರಿಗಳಾದ ಚಂದ್ರಶೇಖರ್, ಸುಜಾತ , ಕೃಷಿ ತಂತ್ರಜ್ಞರ ಸಂಸ್ಥೆಯ ಕಾರ್ಯದರ್ಶಿ ವೇದಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.