ಶ್ರೀ ಕ್ಷೇತ್ರ ಸುತ್ತೂರು ಮಠದಲ್ಲಿ ಶ್ರೀಮನ್ಮಹಾರಾಜ ‘ರಾಜಗುರುತಿಲಕ’ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಸಂಸ್ಮರಣೆ ಅಂಗವಾಗಿ ಏರ್ಪಡಿಸಿದ್ದ “ಜೆ.ಎಸ್.ಎಸ್ ಅಂತರ-ಸಂಸ್ಥೆಗಳ ಕ್ರೀಡಾಕೂಟ” ಕಾರ್ಯಕ್ರಮವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ಉದ್ಘಾಟಿಸಿದರು.
ಕಾರ್ಯಕ್ರಮಕ್ಕೂ ಮೊದಲು ಶ್ರೀ ಶಿವರಾತ್ರಿ ದೇಶಿಕೇಂದ್ರ ಶಿವಯೋಗಿ ಮಹಾಸ್ವಾಮಿಗಳ ಕರ್ತೃ ಗದ್ದುಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದು.
ಬಳಿಕ ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿ, ಕ್ರೀಡಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ ಸಚಿವರಾದ ಶ್ರೀ ಮಂಕಾಳ ಎಸ್. ವೈದ್ಯ, ಅಂತಾರಾಷ್ಟ್ರೀಯ ವೇಟ್ ಲಿಪ್ಟರ್ ಶ್ರೀ ಪುಷ್ಪರಾಜ್ ಹೆಗಡೆ, ಬೀನಾ ವೈದ್ಯ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಶ್ರೀಮತಿ ಡಾ.ಪುಷ್ಪಲತಾ ಮಂಕಾಳ ವೈದ್ಯ ಸೇರಿದಂತೆ ಅನೇಕ ಗಣ್ಯರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.