ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ರಾಜ್ಯ ಒಬ್ಬ ಮುತ್ಸದ್ದಿ ನಾಯಕನನ್ನು ಕಳೆದುಕೊಂಡತಾಗಿದೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಸನ್ಮಾನ್ಯ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅವಿಸ್ಮರಣೀಯ. ಮುಖ್ಯಮಂತ್ರಿಗಳಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆ ಅನನ್ಯ ವಾದುದು.
ಸನ್ಮಾನ್ಯ ಶ್ರೀ ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆಯಿಂದಾಗಿ ಈಗಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದರು.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರಮೇಶ್ ಶೆಟ್ಟಿ ಶಂಕರ್ ಘಟ್ಟ ಸಂತಾಪ ಸೂಚಿಸಿದ್ದಾರೆ.