ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.
ಬಳಿಕ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ “ಗಾಂಧೀ ಭಾರತ” ಶತಮಾನೋತ್ಸವ ಆಚರಣೆ ಅಂಗವಾಗಿ “2025 ನೇ ನೂತನ ವರ್ಷದ ಕ್ಯಾಲೆಂಡರ್ ಹಾಗೂ ಡೈರಿ”ಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕ ಸಚಿವರುಗಳೊಂದಿಗೆ ಬಿಡುಗಡೆಗೊಳಿಸಲಾಯಿತು.
ಸಚಿವ ಸಂಪುಟ ಸದಸ್ಯರುಗಳಾದ ಶ್ರೀ ಡಾ.ಜಿ ಪರಮೇಶ್ವರ್, ಶ್ರೀ ಹೆಚ್.ಕೆ ಪಾಟೀಲ್, ಶ್ರೀ ಕೆ.ಜೆ ಜಾರ್ಜ್, ಶ್ರೀ ಪ್ರಿಯಾಂಕ್ ಖರ್ಗೆ, ಶ್ರೀ ಕೆ.ಹೆಚ್ ಮುನಿಯಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹ್ಮದ್, ಶ್ರೀ ಕೆ.ಗೋವಿಂದ್ ರಾಜ್, ಶ್ರೀ ಯು.ಬಿ ವೆಂಕಟೇಶ್, ನಜೀರ್ ಅಹಮದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.