ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ “ನೆರವು” ಯೋಜನೆ ಅಡಿಯಲ್ಲಿ ಶಿವಮೊಗ್ಗ ಬಂಟ ಸಮಾಜದ ಹತ್ತು ಜನ ಸಮಾಜ ಬಾಂಧವರಿಗೆ ನೀಡಲಾಗಿದ್ದ ತಲಾ 10 ಸಾವಿರ ರೂಪಾಯಿಗಳ ಚೆಕ್ ಅನ್ನು ಶಿವಮೊಗ್ಗ ಬಂಟರ ಭವನದಲ್ಲಿ ನಡೆದ ಚಿಕ್ಕ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಕಾಶ್ ಶೆಟ್ಟಿ ರವರು ಕಳೆದ ಐದು ವರ್ಷಗಳಿಂದ ಸತತವಾಗಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ನೆರವು ಯೋಜನೆ ಅಡಿ ಸಾವಿರಾರು ಕುಟುಂಬಗಳಿಗೆ ಸಹಾಯ ಹಸ್ತ ಚಾಚಿದ್ದಾರೆ. ಮುಂದೆಯೂ ಸಹ ಇದೇ ರೀತಿ ಸಮಾಜಮುಖಿ ಕೆಲಸಗಳಲ್ಲಿ ಮಾಡಲಿ ಎಂದು ಆಶಿಸುತ್ತೇನೆ ಎಂದರು. ಮಹೇಶ್ ಶೆಟ್ಟಿ, ಅರುಣ್ ಶೆಟ್ಟಿ ಉದಯ ಶೆಟ್ಟಿ ಮಹೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.