ಶಿವಮೊಗ್ಗ ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಬಗ್ಗೆ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಎರಡನೇ ಹಂತದ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಡಿ.31 ರಂದು ಬೆಳಗ್ಗೆ 11.30ಕ್ಕೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ನಗರದ ನಾಗರಿಕರು ಹಾಗೂ ಸಂಘ-ಸಂಸ್ಥೆಯವರು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.