ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿರುವ 126 ಅಂಗನವಾಡಿ ಕಾರ್ಯಕರ್ತೆಯರ ಮತ್ತು 448 ಸಹಾಯಕಿಯರ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಹಲವಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯಲ್ಲಿ 4 ನೇ ಹಂತಗಳನ್ನು ಪೂರ್ಣಗೊಳಿಸಿರುವುದಿಲ್ಲ.

ಪೂರ್ಣಗೊಳಿಸದ ಅರ್ಜಿಗಳು ಊರ್ಜಿತವಲ್ಲದ್ದರಿಂದ ಅಂತಹ ಅಭ್ಯರ್ಥಿಗಳು ಅಪೂರ್ಣವಾಗಿರುವ ಅರ್ಜಿಗಳನ್ನು ಪೂರ್ಣಗೊಳಿಸಲು ದಿ:05/01/2025 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, http://karnemakaone.kar.nic.in/abcd/ ವೆಬ್ ಸೈಟ್ ರಲ್ಲಿ ಸಲ್ಲಿಸಿ, ಸಲ್ಲಿಕೆಯ 02 ಮತ್ತು 03ನೇ ಹಂತದಲ್ಲಿ ದಾಖಲಾತಿಗಳನ್ನು ಆಪ್‌ಲೋಡ್ ಮಾಡಿ 03ನೇ ಹಂತದಲ್ಲಿ ಇ-ಹಸ್ತಾಕ್ಷರವಾಗಿರುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಿ 04ನೇ ಹಂತದಲ್ಲಿ ಇ-ಸಹಿಯಾದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295514ನ್ನು ಸಂಪರ್ಕಿಸುವುದು.

Leave a Reply

Your email address will not be published. Required fields are marked *