ಶಿವಮೊಗ್ಗದಲ್ಲಿ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ರೆಸ್ಟೋರೆಂಟ್ ಹೋಟಲ್ ಕ್ಲಬ್ ಗಳಲ್ಲಿ ಡಿಜೆ ಹಾಡಿಗೆ ಯುವಕ ಯುವತಿಯರು ಕುಣಿದು ಕುಪ್ಪಳಿಸಿ ಹೊಸ ವರ್ಷವನ್ನು ವಿಶೇಷವಾಗಿ ಕೇಕ್ ಕಟ್ ಮಾಡಿ ಪಟಾಕಿ ಸಿಡಿಸುವ ಮೂಲಕ ಸ್ವಾಗತ ಮಾಡಿಕೊಂಡಿದ್ದಾರೆ.
ಹೊಸ ವರ್ಷವನ್ನು ವಿಶೇಷವಾಗಿ ಜಿಲ್ಲಾ ರಕ್ಷಣಾಧಿಕಾರಿ ಜಿಕೆ ಮಿಥುನ್ ಕುಮಾರ್ ರವರು ಕರ್ತವ್ಯದ ನಡುವೆ ಸಿಬ್ಬಂದಿಗಳ ಜೊತೆ ಕೇಕ್ ತಿನ್ನಿಸುವ ಮೂಲಕ ಹೊಸ ವರ್ಷವನ್ನು ಆಚರಿಸಿದರು. ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಹೊಸ ವರ್ಷ ಆಚರಿಸಿ ಸಿಬ್ಬಂದಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಪಿಐ ಗುರುರಾಜ್ ಮುಂತಾದವರು ಉಪಸ್ಥಿತರಿದ್ದರು.