ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಅಧ್ಯಕ್ಷರಾದ ಡಿ ಮಂಜುನಾಥ್ ಹೆಚ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋದನಾ ಪರಿಷತ್ತು ದೊಡ್ಡಬಳ್ಳಾಪುರ-ಬೆಂಗಳೂರು ಇವರಿಂದ ರಾಜ್ಯ ಮಟ್ಟದ ಎಚ್.ನರಸಿಂಹಯ್ಯ ಪ್ರಶಸ್ತಿಗೆ ಬಾಜನರಾಗಿದ್ದಾರೆ.

ನಾಡಿನಲ್ಲಿ ಬಹುಮುಖ ಪ್ರತಿಭೆಯನ್ನು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಛಾಪುನ್ನು ಮೂಡಿಸಿದ್ದಾರೆ.ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ,ಕರ್ನಾಟಕ ಜಾನಪದ ಪರಿಷತ್ತು,ಭಾರತ ಸೇವಾದಳ ಹೀಗೆ ಎಲ್ಲವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ ಯಶಸ್ಸನ್ನು ಕಂಡಿದ್ದಾರೆ.ಉತ್ತಮ ವಾಗ್ಮಿಗಳು ವೈಚಾರಿಕತೆಯಲ್ಲಿ ಹಾಗು ಆಧುನಿಕತೆಗೆ ಜಗದ ಬದಲಾವಣೆಗೆ ಹೆಚ್ಚು ಪ್ರೋತ್ಸಾಹದ ಗುಣಧರ್ಮಗಳನ್ನು ಮೈಗೂಡಿಸಿಕೊಂಡಿದ್ದಾರೆ.


ಈ ಎಲ್ಲಾ ಬೆಳವಣಿಗೆಗಳನ್ನು ಮತ್ತು ಸಾಧನೆಯ ಆದಿಯಲ್ಲಿ ಮುನ್ನಡೆದಿರುವ ಈ ಪ್ರಶಸ್ತಿ ಬಂದಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ಇದೇ ರೀತಿ ಸಮಾಜಮುಖಿ ಕೆಲಸಗಳನ್ನು ತೊಡಗಿಸಿಕೊಳ್ಳಲು ಕಸಾಪ ಶಿವಮೊಗ್ಗ ತಂಡ ಆಶಿಸಿದರು.


Leave a Reply

Your email address will not be published. Required fields are marked *