ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ…

ಇ ಸ್ವತ್ತಿಗಾಗಿ ಪ್ರತಿನಿತ್ಯ ಸಾರ್ವಜನಿಕರು ಅಲೆದಾಡುತ್ತಿದ್ದು ಮಹಾನಗರ ಪಾಲಿಕೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕ ಹಿತ ರಕ್ಷಣಾ ವೇದಿಕೆಗಳ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಡಾ ಸತೀಶ್ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ.


ಈ ಸ್ವತುಗಾಗಿ ಜನರು ಮೂರು ತಿಂಗಳಿಂದ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಪಾಲಿಕೆಗೆ ಅಲೆದಾಡುತ್ತಿದ್ದಾರೆ. ಎಷ್ಟು ಬಾರಿ ಮನವಿ ಮಾಡಿಕೊಂಡರು ಸಮಸ್ಯೆ ಬಗೆಹರಿಸಿದಿರುವುದು ಪಾಲಿಕೆ ಆಡಳಿತ ವ್ಯವಸ್ಥೆಯ ವೈಫಲ್ಯ ಎಂದು ಹೇಳಬಹುದು.


ಈ ಸಮಸ್ಯೆ ವಾರದೊಳಗೆ ಬಗೆಹರಿಸಿದ್ದಿದ್ದಲ್ಲಿ ನಾಗರಿಕ ಹಿತ್ರಕ್ಷಣೆ ವೇದಿಕೆ ಒಕ್ಕೂಟದಿಂದ ಸಾವಿರಾರು ಜನ ಪಾಲಿಕೆಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *