ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಬಿಜೆಪಿ ಶಿವಮೊಗ್ಗ ನಗರ ಯುವ ಮೋರ್ಚಾದ ವತಿಯಿಂದ ವಾಕಥಾನ್ ಕಾರ್ಯಕ್ರಮವನ್ನು ನಡೆಯಿತು.
ನಗರದ ನೆಹರು ಕ್ರೀಡಾಂಗಣದಿಂದ ನಿಂದ ಭಾರತೀಯ ಜನತಾ ಪಾರ್ಟಿ ಶಿವಮೊಗ್ಗ ಜಿಲ್ಲಾ ಕಚೇರಿವರೆಗೆ (ಕಾಲ್ನಾಡಿಗೆ ಮೂಲಕ) ವಾಕಥಾನ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಯುವ ಮೋರ್ಚಾ ಅಧ್ಯಕ್ಷರಾದ ರಾಹುಲ್ ಪಿ ಬಿದರೆ ರವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಿಜೆಪಿ ಶಿವಮೊಗ್ಗ ನಗರ ಸಮಿತಿ ಅಧ್ಯಕ್ಷರಾದ ಮೋಹನ್ ರೆಡ್ಡಿ, ನಗರ ಪ್ರಧಾನ ಕಾರ್ಯದರ್ಶಿಗಳಾದ ನಾವುಲೆ ಮಂಜುನಾಥ್ ರವರು, ಜಿಲ್ಲಾ ಕಾರ್ಯದರ್ಶಿಗಳಾದ ಜಗದೀಶ್ ಎನ್ ಉಪಸ್ಥಿರಿದ್ದರು.ಇದೆ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಕುರಿತು ಜಿಲ್ಲಾ ಸದಸ್ಯರಾದ ಸುಧೀಂದ್ರ ಅವರು ಸಾರ್ವಜನಿಕವಾಗಿ ವಿಚಾರವನ್ನು ತಿಳಿಸಿದರು.