ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿಯೋಗವು ಜಿಲ್ಲಾಧ್ಯಕ್ಷರಾದ ಶ್ರೀ ಆರ್.ಮೋಹನ್ ಕುಮಾರ್ ಇವರ ನೇತೃತ್ವದಲ್ಲಿ ಸನ್ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವರಾದ ಶ್ರೀ ಮಧು ಬಂಗಾರಪ್ಪನವರನ್ನು ಭೇಟಿ ಮಾಡಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘವು ಆಯ್ದ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಅಗತ್ಯವಾಗಿರುವ ಶಾಲಾ ಕಟ್ಟಡ ದುರಸ್ಥಿ, ಗ್ರಂಥಾಲಯ, ಕ್ರೀಡಾ ಸಾಮಾಗ್ರಿಗಳು ಹಾಗೂ ಪಠ್ಯ ಸಾಮಾಗ್ರಿಗಳನ್ನು ಒದಗಿಸುವ ಮೂಲಕ ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಶಿಕ್ಷಣದ ಗುಣಾತ್ಮಕ ಬೆಳವಣಿಗೆಯಲ್ಲಿ ಸಂಘವು ಪ್ರಮುಖ ಪಾತ್ರ ವಹಿಸಲಿದೆ-ಎಂಬುದರ ಬಗ್ಗೆ ಸನ್ಮಾನ್ಯ ಸಚಿವರೊಂದಿಗೆ ಚರ್ಚಿಸಲಾಯಿತು.
ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಶೀಘ್ರ ದಿನಾಂಕ ಗೊತ್ತುಪಡಿಸುವುದಾಗಿ ಮಾನ್ಯ ಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಆರ್.ಮೋಹನ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಆರ್.ಪಾಪಣ್ಣ, ಪದಾಧಿಕಾರಿಗಳಾದ ರಂಗನಾಥ್,ಕೊಟ್ರೇಶ್, ಹಿರೇಮಠ, ದಿನೇಶ್,ಸುಮತಿ, ರವಿ, ಇತರರು ಉಪಸ್ಥಿತರಿದ್ದರು.