ಶಿವಮೊಗ್ಗ: ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದ ಸಮಸ್ಯೆಗಳನ್ನು ಬಗೆಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ನೇತೃತ್ವದಲ್ಲಿ ಪದಾಧಿಕಾರಿಗಳು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಚರ್ಚಿಸಿದರು.
ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದ ಪರಿಸರ ವಿಮೋಚನಾ ಪತ್ರದ ಕುರಿತು ಸಮಾಲೋಚನೆ ನಡೆಸಲಾಯಿತು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ವ್ಯವಸ್ಥೆಗೆ ಕ್ರಮ ವಹಿಸಬೇಕು. ಮೆಕ್ಕೆಜೋಳ ಸಂಶೋಧನಾ ಕೇಂದ್ರ ಸ್ಥಾಪನೆಗೆ ಚಾಲನೆ ನೀಡಬೇಕು. ಶೀಘ್ರದಲ್ಲಿ ಫುಡ್ ಪಾರ್ಕ್ ಸ್ಥಾಪನೆಗೆ ಕ್ರಮ ವಹಿಸಬೇಕು ಎಂದು ಚರ್ಚಿಸಲಾಯಿತು.
ಕೇಂದ್ರ ಸರ್ಕಾರ ದ ನೀತಿಯಂತೆ ರಾಜ್ಯ ಸರ್ಕಾರವು ಸಣ್ಣ ಮತ್ತು ಮಾಧ್ಯಮ ಕೈಗಾರಿಕೆ ತಯಾರಿಸುವ ವಸ್ತುಗಳೆಗೆ ಪಿಎಲ್ಐ ಸ್ಕೀಮ್ ಪ್ರಾರಂಭಿಸ ಬೇಕು ಎಂದು ಮನವಿ ಮಾಡಿದರು.
ಕೈಗಾರಿಕಾ ಭೂಮಿ ದರ ಹೆಚ್ಚಳ, ಎಂಎಸ್‌ಎಂಇ ಮತ್ತು ಬೃಹತ್ ಉದ್ಯಮ ಸ್ಥಾಪನೆ ಸಂಬಂಧ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಮಾಜಿ ಅಧ್ಯಕ್ಷ ಎಸ್.ರುದ್ರೇಗೌಡ, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ನಿರ್ದೇಶಕಿ ಲಕ್ಷ್ಮೀದೇವಿ ಗೋಪಿನಾಥ್, ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ಅಧ್ಯಕ್ಷ ಡಿ.ಜಿ.ಬೆನಕಪ್ಪ, ಮಾಜಿ ಅಧ್ಯಕ್ಷ ರಮೇಶ್ ಹೆಗ್ಡೆ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೀಶ್, ಜಿಲ್ಲಾ ಆಶ್ರಯ ಯೋಜನೆ ಸಮಿತಿ ಸದಸ್ಯ ಎಚ್.ಮಧು, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ದಿನೇಶ್ ಇತರರಿದ್ದರು.