ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮತ್ತು ಸಮಸ್ತ ಪೊಲೀಸ್ ತಂಡ…

ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ತಂಡದಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಚಾಲನೆಯಾಗಿದೆ.ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಕೋಟೆ ರಸ್ತೆಯಲ್ಲಿರುವ ಪೊಲೀಸ್ ಗೆಸ್ಟ್ ಹೌಸ್ ಆವರಣದಲ್ಲಿ ಜಾಗೃತಿ ಪ್ರದರ್ಶನ – 2025 ಜಿಲ್ಲಾ ರಕ್ಷಣಾಧಿಕಾರಿ ಜಿಕೆ ಮಿಥುನ್ ಕುಮಾರ್ ವಿಶೇಷ ಅತಿಥಿಯಾಗಿ ಪಾಲ್ಗೊಂಡು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಹೇಳಿದರು.

ಕಾರ್ಯಕ್ರಮ ಉದ್ದೇಶದಿಂದ ಮಾತನಾಡಿದ ಅವರು, ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಸಂಬಂಧ ರಾಜ್ಯದಲ್ಲಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ವಿನೂತನ ರೀತಿಯ ಕ್ರಿಯಾತ್ಮಕ ರೂಪದಲ್ಲಿ ಅರಿವು ಕಾರ್ಯಮವನ್ನು ಹಮ್ಮಿಕೊಂಡಿದ್ದು, ಅಪಘಾತ ಮುಕ್ತ ಸಮಾಜದ ನಿರ್ಮಾಣವೇ ಮುಖ್ಯ ಗುರಿಯಾಗಿರುತ್ತದೆ ಎಂದು ಹೇಳಿದರು.

ಈಗಿನ ದಿನಗಳಲ್ಲಿ ಸಂಚಾರ ದಟ್ಟಣೆ ಹಾಗೂ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ಹೆಚ್ಚಿನದಾಗಿ ಯುವಕರೇ ರಸ್ತೆ ಅಪಘಾತಗಳಿಗೆ ಒಳಗಾಗಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಸಂದರ್ಭಗಳಲ್ಲಿ ಮೃತರ ಕುಟುಂಬ ಹಾಗೂ ಅವಲಂಬಿತರು ತೊಂದರೆಗೆ ಒಳಗಾಗುತ್ತಾರೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ರಸ್ತೆ ಸಂಚಾರ ನಿಯಮಗಳನ್ನು ಪಾಲನೆ ಮಾಡೋಣ ಎಂದು ಕರೆ ನೀಡಿದರು.

ನಮ್ಮ ಸುರಕ್ಷತೆಯ ದೃಷ್ಠಿಯಿಂದ ಎಲ್ಲರೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ದ್ವಿ ಚಕ್ರ ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದರಿಂದ ಹಾಗೂ ಕಾರು / ನಾಲ್ಕು ಚಕ್ರದ ವಾಹನಗಳಲ್ಲಿ ಪ್ರಯಾಣಿಸುವಾಗ ಎಲ್ಲರೂ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸುವುದರಿಂದ ರಸ್ತೆ ಅಪಘಾತಗಳು ಜರುಗಿದಾಗ ಆಗ ಬಹುದಾದ ಪ್ರಾಣ ಹಾನಿಯನ್ನು ತಡೆಯಲು ಸಾಧ್ಯವಿರುತ್ತದೆ. ಅಜಾಗರೂಕತೆಯ ಚಾಲನೆಯು ಸಹಾ ಅಪಘಾತಗಳಿಗೆ ಕಾರಣವಾಗುತ್ತವೆ. ಆದ್ದರಿಂದ ಕಡ್ಡಾಯವಾಗಿ ವೇಗದ ಮಿತಿಯಲ್ಲಿಯೇ ವಾಹನ ಚಲಾಯಿಸಿ. ವಾಹನಗಳಿಗೆ ಇನ್ಸೂರೆನ್ಸ್ ಮಾಡಿಸಿಯೇ ಚಲಿಸಿ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ರಸ್ತೆ ಅಪಘಾತಗಳು ಜರುಗಿದಾಗ ಗಾಯಾಳುಗಳ ಜೀವ ರಕ್ಷಣೆ ಮಾಡಿದಂತಹ ಸಾರ್ವಜನಿಕರಾದ 1) ಕಿರಣ್ ಕುಮಾರ್, 2) ಸಂತೋಷ್, 3) ಆಶಿಶ್, 4) ಪ್ರವೀಣ್ ಕುಮಾರ್ ಮತ್ತು 5) ಶ್ರೀಕಾಂತ್ ರವರಿಗೆ ಜೀವ ರಕ್ಷಕ ಪ್ರಶಸ್ತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅನಿಲ್ ಕುಮಾರ್ ಭುಮರಡ್ಡಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕರು-1, ಶಿವಮೊಗ್ಗ ಜಿಲ್ಲೆ, ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು-2, ಶಿವಮೊಗ್ಗ ಜಿಲ್ಲೆ, ಬಾಬು ಆಂಜನಪ್ಪ, ಡಿವೈಎಸ್.ಪಿ ಶಿವಮೊಗ್ಗ ಎ ಉಪ ವಿಭಾಗ, ಸಂಜೀವ್ ಕುಮಾರ್ ಟಿ ಡಿವೈಎಸ್.ಪಿ ಶಿವಮೊಗ್ಗ ಬಿ ಉಪ ವಿಭಾಗ, ಸಂತೋಷ್ ಕುಮಾರ್ ಸಿಪಿಐ ಶಿವಮೊಗ್ಗ ಸಂಚಾರ ವೃತ್ತ ಹಾಗೂ ಶಿವಮೊಗ್ಗ ನಗರದ ಪೊಲೀಸ್ ಅಧಿಕಾರಿಗಳ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *