ರಾಜ್ಯದಲ್ಲಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ, ಕೋಟೆ ರಸ್ತೆಯಲ್ಲಿರುವ ಪೊಲೀಸ್ ಗೆಸ್ಟ್ ಹೌಸ್ ಆವರಣದಲ್ಲಿ ಜಾಗೃತಿ ಪ್ರದರ್ಶನ – 2025 ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಎಸ್ಪಿ ಮಿಥುನ್ ಕುಮಾರ್ ಜಿ. ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಾರ್ವಜನಿಕರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸಂಚಾರ ಸಹಾಯವಾಣಿ ಸಂಖ್ಯೆ 8277983404 ಗೆ ಚಾಲನೆ ನೀಡಲಾಯಿತು ಮತ್ತು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರ ಕಲಾ ಸ್ಪರ್ದೆಯನ್ನು ಆಯೋಜಿಸಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ವಿಧ್ಯಾರ್ಥಿಗಳಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಸಂಬಂಧ ಅಣಕು ಪ್ರದರ್ಶನವನ್ನು ರೋಡ್ ಮಾರ್ಕಿಂಗ್, ಸೂಚನಾ ಫಲಕಗಳು, ಎಚ್ಚರಿಕೆ ಫಲಕಗಳು ಹಾಗೂ ಅಪಘಾತದಿಂದ ಉಂಟಾಗುವ ಪರಿಣಾಮಗಳ ಕುರಿತು ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸಲಾಗುವುದು ಮತ್ತು ಸಂಚಾರ ಉಪಕರಣಗಳ, ಅಪ್ರಾಪ್ತ ವಯಸ್ಕರ ವಾಹನ ಚಾಲನೆಯ ದುಷ್ಪರಿಣಾಮ ಮತ್ತು ದಂಡ, ವಾಹನ ಚಾಲನೆ.

ಸಂದರ್ಭದಲ್ಲಿ ಮೊಬೈಲ್ ಫೋನ್ ಬಳಕೆಯ ದುಷ್ಪರಿಣಾಮ ಮತ್ತು ದಂಡ, 112 ಪೊಲೀಸ್ ತುರ್ತು ಸಹಾಯವಾಣಿ, ಪ್ರಥಮ ಚಿಕಿತ್ಸೆ, ಗುಡ್ ಸಮರ್ಟನ್, ಸ್ಮಾರ್ಟ್ ಸಿಟಿ ಕ್ಯಾಮೆರಾ ಮತ್ತು ಫೈನ್ , ಹೆಲ್ಮೆಟ್ ಜಾಗೃತಿ, ಡ್ರಂಕ್ ಅಂಡ್ ಡ್ರೈವ್, ಸೈಬರ್ ಕ್ರೈಂ, ಆರ್.ಟಿ.ಓ ಗೆ ಸಂಬಂಧಪಟ್ಟ ದಾಖಲಾತಿ, ವಾಹನಗಳ ವಿಮೆ, ಎಮಿಷನ್ ಟೆಸ್ಟ್ ಸರ್ಟಿಫಿಕೇಟ್ ಮತ್ತು ಫೀಡ್ ಬ್ಯಾಕ್ ಸೇರಿದಂತ ಮಾಹಿತಿಯನ್ನು ನೀಡುವ ಸಲುವಾಗಿ ಒಟ್ಟು 16 ಕೌಂಟರ್ ಗಳನ್ನು ತೆರೆಯಲಾಗಿದ್ದು, ಸದರಿ ಕೌಂಟರ್ ಗಳಲ್ಲಿ ಸಾರ್ವಜನಿಕರಿಗೆ ಸಂಬಂಧಪಟ್ಟ ಮಾಹಿತಿ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *